
ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಿ ದರ್ಶನ ಪಡೆಯಲು ಮೂರನೇ ದಿನವೂ ಭಕ್ತ ಸಾಗರ ಹರಿದು ಬಂದಿದೆ. ಸರದಿ ಸಾಲಿನಲ್ಲಿ ನಿಂತು ಭಕ್ತರು ಹಾಸನಂಬೆ ದೇವಿ ದರ್ಶನ ಪಡೆಯುತ್ತಿದ್ದಾರೆ.
ಮತ್ತೆ ರಾತ್ರಿಯಿಂದಲೂ ಭಕ್ತರು ಸರತಿಯಲ್ಲಿ ನಿಂತು ದೇವಿಯ ದರ್ಶನ ಪಡೆದಿದ್ದಾರೆ. ನವೆಂಬರ್ 3ರಂದು ಹಾಸನಾಂಬೆ ಗರ್ಭಗುಡಿಯ ಬಾಗಿಲು ತೆರೆದಿತ್ತು. ನವೆಂಬರ್ 15ರ ಮುಂಜಾನೆವರೆಗೂ ದೇವಿಯ ದರ್ಶನಕ್ಕೆ ಅವಕಾಶವಿದೆ. ನವೆಂಬರ್ 15ರಂದು ಗರ್ಭಗುಡಿ ಬಾಗಿಲು ಮುಚ್ಚಲಿದೆ.
ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬ ದೇವಿ ದರ್ಶನ ಪಡೆದುಕೊಳ್ಳಲು ರಾಜ್ಯದ ವಿವಿಧೆಡೆಯಿಂದ ಭಕ್ತರು ಆಗಮಿಸಿದ್ದಾರೆ. ಭಕ್ತರಿಗೆ ದೇವಿಯ ದರ್ಶನ ಪಡೆದುಕೊಳ್ಳಲು ಜಿಲ್ಲಾಡಳಿತ ವ್ಯವಸ್ಥೆ ಮಾಡಿದೆ.