alex Certify ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದರ್ಶನಕ್ಕೆ ಇಂದೇ ಕೊನೆ ದಿನ, ದೇಗುಲಕ್ಕೆ ಮುಗಿಬಿದ್ದ ಭಕ್ತಗಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದರ್ಶನಕ್ಕೆ ಇಂದೇ ಕೊನೆ ದಿನ, ದೇಗುಲಕ್ಕೆ ಮುಗಿಬಿದ್ದ ಭಕ್ತಗಣ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಿ ದರ್ಶನಕ್ಕೆ ಭಕ್ತರು ಮುಗಿಬಿದ್ದಿದ್ದಾರೆ. ಸಾರ್ವಜನಿಕ ದರ್ಶನಕ್ಕೆ ಇವತ್ತು ಕೊನೆ ದಿನವಾದ ಹಿನ್ನೆಲೆಯಲ್ಲಿ ದೇಗುಲದಲ್ಲಿ ಅಪಾರ ಸಂಖ್ಯೆಯ ಭಕ್ತರು ಆಗಮಿಸಿದ್ದಾರೆ.

ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತು ಭಕ್ತರು ಮುಂದೆ ಸಾಗತೊಡಗಿದ್ದಾರೆ. ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಿ ದರ್ಶನಕ್ಕೆ ಹೆಚ್ಚಿನ ಸಂಖ್ಯೆಯ ಭಕ್ತರು ಬರುತ್ತಾರೆ. ಈ ಬಾರಿ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಿಧನದ ಹಿನ್ನೆಲೆಯಲ್ಲಿ ಒಂದೆರಡು ದಿನಗಳ ಕಾಲ ಭಕ್ತರ ಸಂಖ್ಯೆ ಇಳಿಮುಖವಾಗಿತ್ತು.

ಇಂದು ಕೊನೆ ದಿನವಾಗಿರುವುದರಿಂದ ದೇವಿಯ ದರ್ಶನಕ್ಕೆ ಭಕ್ತಗಣ ಮುಗಿಬಿದ್ದಿದ್ದು, ಭಾರಿ ಸಂಖ್ಯೆಯ ಭಕ್ತರ ಆಗಮನದ ಹಿನ್ನಲೆಯಲ್ಲಿ ಯಾವುದೇ ತೊಂದರೆಯಾಗದಂತೆ ದರ್ಶನ ಪಡೆದುಕೊಳ್ಳಲು ಜಿಲ್ಲಾಡಳಿತದಿಂದ ಸಕಲ ವ್ಯವಸ್ಥೆ ಕಲ್ಪಿಸಲಾಗಿದೆ. ನೂಕುನುಗ್ಗಲು ಉಂಟಾಗಿದ್ದು, ಪೊಲೀಸರು, ದೇವಾಲಯದ ಸಿಬ್ಬಂದಿ ಭಕ್ತರು ಸರತಿ ಸಾಲಿನಲ್ಲಿ ಆಗಮಿಸಿ ದೇವಿಯ ದರ್ಶನ ಪಡೆದುಕೊಳ್ಳಲು ವ್ಯವಸ್ಥೆ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...