ಬೆಂಗಳೂರು : ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣ ರಾಜ್ಯದಲ್ಲಿ ಭಾರಿ ಚರ್ಚೆಯಾಗುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ನೆರವಿಗೆ ಸಹಾಯವಾಣಿ ಆರಂಭಿಸಲಾಗಿದೆ.
ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ರಚಿಸಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ಸಹಾಯವಾಣಿಗೆ ಈವರೆಗೆ 30ಕ್ಕೂ ಹೆಚ್ಚು ಕರೆಗಳು ಬಂದಿವೆ. ದೌರ್ಜನ್ಯಕ್ಕೆ ಒಳಗಾಗಿರುವ ಸಂತ್ರಸ್ತರು ಎಸ್ಐಟಿ ಸಂಪರ್ಕಿಸಿ ದೂರು ನೀಡಬಹುದು. ಅವರು ಹೇಳಿದ ಸ್ಥಳಕ್ಕೆ ಬಂದು ಮಾಹಿತಿ ಸಂಗ್ರಹಿಸಲು ತಂಡ ಸಿದ್ಧವಿದೆ. ಗುರುತು ಹಾಗೂ ಮಾಹಿತಿ ವಿಷಯದಲ್ಲಿ ಗೌಪ್ಯತೆ ಕಾಪಾಡಲಾಗುತ್ತದೆ. ನೇರವಾಗಿ ಅಧಿಕಾರಿಗಳನ್ನೂ ಸಂಪರ್ಕಿಸಬಹುದು ಎಂದು ಎಸ್ಐಟಿ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.