ಮಡಿಕೇರಿ : ಲೇಡಿಸ್ ಹಾಸ್ಟೆಲ್ ಮುಂದೆಯೇ ಅಸಭ್ಯ ವರ್ತನೆ ತೋರಿ ಹಸ್ತ ಮೈಥುನ ಮಾಡಿಕೊಳ್ಳುತ್ತಿದ್ದ ವಿಕೃತ ಕಾಮಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಡಿಕೇರಿಯ ಮೆಡಿಕಲ್ ಕಾಲೇಜಿನ ಬಳಿ ನಿತ್ಯ ರಾತ್ರಿ ಆಟೋದಲ್ಲಿ ಬಂದು ಶಾಜಿ (27) ಎಂಬಾತ ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸುತ್ತಿದ್ದನು. ಕಂಠಪೂರ್ತಿ ಮದ್ಯಸೇವನೆ ಮಾಡಿ ಕಳೆದ ಕೆಲವು ದಿನಗಳಿಂದ ಹಾಸ್ಟೆಲ್ ಬಳಿ ಈ ರೀತಿ ಅಸಭ್ಯ ವರ್ತನೆ ತೋರುತ್ತಿದ್ದನು. ಈ ಹಿನ್ನೆಲೆ ವಿದ್ಯಾರ್ಥಿನಿಯರು ಕಠಿಣ ಕ್ರಮಕ್ಕೆ ಆಗ್ರಹಿಸಿ ಪೊಲೀಸರಿಗೆ ದೂರು ನೀಡಿದ್ದರು.
ಹುಡುಗಿಯರ ಎದುರು ಬಂದು ಬಟ್ಟೆ ಬಿಚ್ಚಿ ಅಸಭ್ಯ ವರ್ತನೆ ತೋರುತ್ತಿದ್ದನು ಎಂದು ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯರು ಆರೋಪಿಸಿದ್ದರು. ಘಟನೆ ಸಂಬಂಧ ದೂರು ನೀಡಿದರೂ ಕಾಲೇಜು ಆಡಳಿತ ಮಂಡಳಿ ಕ್ರಮ ಕೈಗೊಂಡಿಲ್ಲ, ಈ ಕೂಡಲೇ ಆರೋಪಿಯನ್ನು ಬಂಧಿಸಬೇಕು ಎಂದು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದರು. ಈ ಸಂಬಂಧ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿತ್ತು.