alex Certify ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಘೋಸ್ಟ್’ ರಿಲೀಸ್‌ ಗೆ ಡೇಟ್‌ ಫಿಕ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಘೋಸ್ಟ್’ ರಿಲೀಸ್‌ ಗೆ ಡೇಟ್‌ ಫಿಕ್ಸ್

ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ಬಹು ನಿರೀಕ್ಷಿತ ಘೋಸ್ಟ್ ಸಿನಿಮಾ ಅಕ್ಟೋಬರ್ 19ಕ್ಕೆ ವಿಶ್ವಾದ್ಯಂತ ತೆರೆ ಕಾಣಲಿದೆ.‌

ಈ ಕುರಿತು ಶಿವರಾಜ್ ಕುಮಾರ್ ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ಪೇಜ್‌ ನಲ್ಲಿ ಅಪ್ಲೋಡ್ ಮಾಡಿದ್ದು, ಅವರ ಅಭಿಮಾನಿಗಳು ಸಂಭ್ರಮಿಸಿದ್ದಾರೆ.

ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಚಿತ್ರತಂಡ ಈ ಘೋಷಣೆ ಮಾಡಿದ್ದು ಕನ್ನಡ ಸೇರಿದಂತೆ ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಈ ಚಿತ್ರ ಬಿಡುಗಡೆಯಾಗಲಿದೆ.

ಎಂ ಜಿ ಶ್ರೀನಿವಾಸ್ ಈ ಚಿತ್ರವನ್ನು ನಿರ್ದೇಶಿಸುವುದರ ಜೊತೆಗೆ ಪ್ರಮುಖ ಪಾತ್ರ ಒಂದರಲ್ಲಿ ಕಾಣಿಸಿಕೊಂಡಿದ್ದು, ಶಿವರಾಜ್ ಕುಮಾರ್ ಸೇರಿದಂತೆ ಜಯರಾಮ್, ಅನುಪಮ್ ಕೇರ್, ಕೆಜಿಎಫ್ ಖ್ಯಾತಿಯ ಅರ್ಚನಾ ಜೋಯಿಸ್, ಸತ್ಯ ಪ್ರಕಾಶ್ ಹಾಗೂ ಪ್ರಶಾಂತ್ ಬಣ್ಣ ಹಚ್ಚಿದ್ದಾರೆ. ಸಂದೇಶ್ ನಾಗರಾಜ್ ತಮ್ಮ ಸಂದೇಶ್ ಪ್ರೊಡಕ್ಷನ್ಸ್ ಬ್ಯಾನರ್ ನಡಿ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಅರ್ಜುನ್ ಜನ್ಯ ಸಂಗೀತ ಸಂಯೋಜನೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...