ವಿಜಯಪುರ : ಬಿಜೆಪಿಯವರು ವಿಪಕ್ಷ ನಾಯಕನ ಸ್ಥಾನಕ್ಕೂ ನೂರಾರು ಕೋಟಿ ಫಿಕ್ಸ್ ಮಾಡಿದ್ದೀರಾ? ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಸಿಎಂ ಗಾದಿಗಾಗಿ 2,500 ಕೋಟಿ ರೂ. ಫಿಕ್ಸ್ ಮಾಡಿದಂತೆ ವಿಪಕ್ಷ ನಾಯಕನ ಸ್ಥಾನಕ್ಕೂ ನೂರಾರು ಕೋಟಿ ರೂ. ಫಿಕ್ಸ್ ಮಾಡಿದ್ದೀರಾ? ಬಿಜೆಪಿಯಲ್ಲಿ ಸಿಎಂ ಗಾದಿಗಾಗಿ ಹಣ ನೀಡಬೇಕು ಎಂದು ಹೇಳಿದ್ರು. ವಿಪಕ್ಷ ನಾಯಕನ ಸ್ಥಾನಕ್ಕೂ ಫಿಕ್ಸ್ ಮಾಡಿದ್ದೀರಾ? ಎಂದು ಪ್ರಶ್ನಿಸಿದ್ದಾರೆ.
ಬಡವರ ಪಾಲಿಗೆ ಕಾಂಗ್ರೆಸ್ ಕೊಳ್ಳಿ ಇಟ್ಟಿದೆ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಗೆ ತಿರುಗೇಟು ನೀಡಿದ ಎಂ.ಬಿ.ಪಾಟೀಲ್, ಪ್ರಹ್ಲಾದ್ ಜೋಶಿ ಅವರಿಗೆ ಬಡವರ ಬಗ್ಗೆ ಗೊತ್ತಿಲ್ಲ. ಅನ್ನ ಭಾಗ್ಯ ಯೋಜನೆ, 200 ಯುನಿಟ್ ಉಚಿತ ವಿದ್ಯುತ್, ಮಹಿಳೆಯರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣ ನೀಡುವುದು ಶ್ರೀಮಂತರಿಗಾ?ಘನತೆಗೆ ತಕ್ಕ ಹಾಗೆ ಮಾತನಾಡಿ, ಹೊಟ್ಟೆ ಉರಿಗಾಗಿ ಮಾತನಾಡಬೇಡಿ ಎಂದು ತಿರುಗೇಟು ನೀಡಿದ್ದಾರೆ.