ಹಾವೇರಿ: ಕಂಟೈನರ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಮೂವರು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ಹೊರವಲಯದಲ್ಲಿ ನಡೆದಿದೆ.
ರಾಣೆಬೆನ್ನೂರು ಸಮೀಪ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರ್ ನಲ್ಲಿದ್ದ ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.