
ಹಾವೇರಿ: ಎರಡು ಬೈಕ್ ಗಳಿಗೆ ಕಾರ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಆಡೂರು ಬಳಿ ನಡೆದಿದೆ.
ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಆಡೂರು ಗ್ರಾಮದ ಬಳಿ ಕಾರ್ ಟೈಯರ್ ಸ್ಪೋಟಗೊಂಡು ಅಪಘಾತ ಸಂಭವಿಸಿದೆ. ಗಣೇಶ ಲಮಾಣಿ(35), ರಮೇಶ ಲಮಾಣಿ(40) ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದಲ್ಲಿ ಮತ್ತೊಬ್ಬರು ಗಾಯಗೊಂಡಿದ್ದು, ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.