alex Certify BREAKING: ಎರಡು ಕಾರ್ ಗಳಿಗೆ ಲಾರಿ ಡಿಕ್ಕಿ, ಭೀಕರ ಅಪಘಾತದಲ್ಲಿ ನಾಲ್ವರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಎರಡು ಕಾರ್ ಗಳಿಗೆ ಲಾರಿ ಡಿಕ್ಕಿ, ಭೀಕರ ಅಪಘಾತದಲ್ಲಿ ನಾಲ್ವರು ಸಾವು

ಹಾವೇರಿ: ಎರಡು ಕಾರ್ ಗಳಿಗೆ ಲಾರಿ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ರಟ್ಟಿಹಳ್ಳಿ ಸಮೀಪ ನಡೆದಿದೆ.

ಮೆಕ್ಕೆಜೋಳ ತುಂಬಿದ್ದ ಲಾರಿ ಕಾರ್ ಗಳಿಗೆ ಡಿಕ್ಕಿ ಹೊಡೆದಿದೆ. ರಟ್ಟಿಹಳ್ಳಿ ತಾಲೂಕಿನ ಕಡೂರು ಸಮೀಪ ಅಪಘಾತ ನಡೆದಿದೆ. ಮೆಕ್ಕೆಜೋಳ ತುಂಬಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಕಾರ್ ಗಳಿಗೆ ಡಿಕ್ಕಿಯಾಗಿದ್ದು, ಸ್ಥಳದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

ಇಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಎರಡು ಕಾರ್ ಗಳಲ್ಲಿ ಪ್ರಯಾಣಿಸುತ್ತಿದ್ದ ಎಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದು, ರಟ್ಟಿಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...