alex Certify BREAKING: ಲಾರಿ ಡಿಕ್ಕಿ: ಬೈಕ್ ನಲ್ಲಿದ್ದ ಮೂವರ ಸಾವು; ಡಿಕ್ಕಿ ರಭಸಕ್ಕೆ ಗುರುತು ಸಿಗದಷ್ಟು ಛಿದ್ರಗೊಂಡ ದೇಹಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಲಾರಿ ಡಿಕ್ಕಿ: ಬೈಕ್ ನಲ್ಲಿದ್ದ ಮೂವರ ಸಾವು; ಡಿಕ್ಕಿ ರಭಸಕ್ಕೆ ಗುರುತು ಸಿಗದಷ್ಟು ಛಿದ್ರಗೊಂಡ ದೇಹಗಳು

ಹಾವೇರಿ: ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ, ಪುತ್ರ ಸಾವನ್ನಪ್ಪಿದ್ದಾರೆ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಬಳಿ ಅಪಘಾತ ಸಂಭವಿಸಿದೆ.

ಬೆಂಗಳೂರು -ಪುಣೆ ರಾಷ್ಟ್ರೀಯ ಹೆದ್ದಾರಿ ಮೋಟೆಬೆನ್ನೂರು ಸಮೀಪ ಬಳಿ ಘಟನೆ ನಡೆದಿದೆ. ಅಪಘಾತ ನಂತರ ಲಾರಿಯನ್ನು ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಮೂವರ ದೇಹಗಳು ಛಿದ್ರ ಛಿದ್ರವಾಗಿವೆ.

ಗುರುತು ಸಿಗಲಾರದಷ್ಟು ದಂಪತಿ, ಮಗನ ಮೃತ ದೇಹ ಛಿದ್ರಗೊಂಡಿವೆ. 6 ವರ್ಷದ ಪುತ್ರಿಯ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...