
ಹಾವೇರಿ: ನಿಂತಿದ್ದ ಕ್ಯಾಂಟರ್ ಗೆ ಕ್ರೂಸರ್ ಡಿಕ್ಕಿಯಾಗಿದ್ದು ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಹಾವೇರಿ ಬಳಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಘಟನೆ ನಡೆದಿದೆ. ಅಪಘಾತದ ತೀವ್ರತೆಯಿಂದಾಗಿ ನಜ್ಜುಗುಜ್ಜಾಗಿದ್ದ ಕ್ರೂಸರ್ ನಲ್ಲಿ ಸಿಲುಕಿದವರನ್ನು ಹೊರತೆಗೆಯಲು ಪೊಲೀಸರು ಮತ್ತು 108 ಆಂಬುಲೆನ್ಸ್ ಸಿಬ್ಬಂದಿ ಹರಸಾಹಸ ನಡೆಸಿದ್ದಾರೆ. ನಜ್ಜುಗುಜ್ಜಾದ ವಾಹನದಿಂದ ಹರಸಾಹಸ ನಡೆಸಿ ಇಬ್ಬರನ್ನು ಹೊರತೆಗೆದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹಾವೇರಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.