alex Certify ಮಳೆಯಿಂದ ಸಂಕಷ್ಟದಲ್ಲಿದ್ರೂ ಸ್ಪಂದಿಸದ ಜನಪ್ರತಿನಿಧಿಗೆ ಜನರಿಂದಲೇ ಗೂಸಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಳೆಯಿಂದ ಸಂಕಷ್ಟದಲ್ಲಿದ್ರೂ ಸ್ಪಂದಿಸದ ಜನಪ್ರತಿನಿಧಿಗೆ ಜನರಿಂದಲೇ ಗೂಸಾ

ಹಾವೇರಿ: ಮಳೆಯಿಂದ ಜನ ಸಂಕಷ್ಟದಲ್ಲಿದ್ದರೂ ಸ್ಪಂದಿಸದ ಹಿನ್ನಲೆಯಲ್ಲಿ ಆಕ್ರೋಶಗೊಂಡ ಸಾರ್ವಜನಿಕರು ಗ್ರಾಮ ಪಂಚಾಯಿತಿ ಅಧ್ಯಕ್ಷನಿಗೆ ಧರ್ಮದೇಟು ನೀಡಿದ ಘಟನೆ ಶಿಶುವಿನಹಾಳ ಗ್ರಾಮದಲ್ಲಿ ನಡೆದಿದೆ.

ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಶಿಶುವಿನಹಾಳ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷನಿಗೆ ಗ್ರಾಮಸ್ಥರು ಗೂಸಾ ನೀಡಿದ್ದಾರೆ. ಮಳೆಯಿಂದ ಮನೆ ಕುಸಿದು ಬಸನಗೌಡ ಪಾಟೀಲ ಮೃತಪಟ್ಟಿದ್ದರು. ಹಲವು ಮನೆಗಳು ಕುಸಿದಿವೆ. ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಯುವಕ ಮೃತಪಟ್ಟರೂ ಜನಪ್ರತಿನಿಧಿಗಳು, ಅಧಿಕಾರಿಗಳು ಸ್ಪಂದಿಸಿಲ್ಲವೆಂದು ಆಕ್ರೋಶಗೊಂಡ ಗ್ರಾಮಸ್ಥರು ಗ್ರಾಪಂ ಅಧ್ಯಕ್ಷನಿಗೆ ಧರ್ಮದೇಟು ನೀಡಿದ್ದಾರೆ ಎನ್ನಲಾಗಿದೆ.

ಅಧಿಕಾರಿಗಳು, ಜನಪ್ರತಿನಿಧಿಗಳು ಸ್ಪಂದಿಸಿಲ್ಲ ಎಂದು ತಹಶೀಲ್ದಾರ್ ಗ್ರಾಮಕ್ಕೆ ನೀಡಿದ್ದ ಸಂದರ್ಭದಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಹಶೀಲ್ದಾರ್ ಎದುರಲ್ಲಿಯೇ ಗ್ರಾಪಂ ಅಧ್ಯಕ್ಷನ ಎಳೆದಾಡಿ ಗೂಸಾ ನೀಡಿದ್ದಾರೆ. ಬಿಡಿಸಿಕೊಳ್ಳಲು ಯತ್ನಿಸಿದ ಗ್ರಾಪಂ ಸದಸ್ಯನ ಮೇಲೆ ಗರಂ ಆಗಿ, ಆತನ ಮೇಲೆಯೂ ಹಲ್ಲೆಗೆ ಯತ್ನಿಸಿದ್ದಾರೆ. ಶಿಗ್ಗಾಂವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...