
ಹಾವೇರಿ: ಹಾವೇರಿಯಾದ್ಯಂತ ಧಾರಾಕಾರ ಮಳೆಯಿಂದಾಗಿ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದ್ದು, ಚರಂಡಿ ನೀರು ರಸ್ತೆಯ ಮೇಲೆ ಹರಿಯುತ್ತಿದೆ. ರಸ್ತೆ ಕಾಣದೇ 12 ವರ್ಷದ ಬಾಲಕನೊಬ್ಬ ಚರಂಡಿ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ.
ಹಾವೇರಿ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂಭಾಗವೇ ಈ ದುರಂತ ಸಂಭವಿಸಿದೆ. 12 ವರ್ಷದ ನಿವೇದನ್ ಬಸವರಾಜ್ ಚರಂಡಿ ನೀರಿನಲ್ಲಿ ಕೊಚ್ಚಿ ಹೋಗಿರುವ ಬಾಲಕ.
ಘಟಾನಾ ಸ್ಥಳಕ್ಕೆ ನಗರಸಭೆ ಅಧಿಕಾರಿಗಳು, ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಚರಂಡಿ ನೀರಲ್ಲಿ ಕೊಚ್ಚಿ ಹೋದ ಬಾಲಕನಿಗಾಗಿ ಶೋಧ ನಡೆಸಲಾಗುತ್ತಿದೆ.