
ಹಾವೇರಿ ಜಿಲ್ಲೆ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿ.ಎಂ. ಉದಾಸಿ ಅವರ ಅಂತ್ಯಸಂಸ್ಕಾರ ಹಾನಗಲ್ ವಿರಕ್ತ ಮಠದ ಆವರಣದಲ್ಲಿ ನೆರವೇರಿದೆ.
ವೀರಶೈವ ಲಿಂಗಾಯಿತ ಸಂಪ್ರದಾಯದಂತೆ ಕ್ರಿಯಾ ಸಮಾಧಿ ನೆರವೇರಿಸಲಾಗಿದೆ. ಅವರ ಪುತ್ರ, ಸಂಸದ ಶಿವಕುಮಾರ ಉದಾಸಿ ಅಂತಿಮ ವಿಧಿವಿಧಾನ ನೆರವೇರಿಸಿದ್ದಾರೆ. ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿದ್ದು, 3 ಸುತ್ತು ಕುಶಾಲತೋಪು ಹಾರಿಸಿ ಜಿಲ್ಲಾಡಳಿತದಿಂದ ಗೌರವ ಸೂಚಿಸಲಾಗಿದೆ.
ಮೂರು ಸಾವಿರ ಮಠದ ಗುರುಸಿದ್ಧ ರಾಜಯೋಗೀಂದ್ರ ಶ್ರೀಗಳು, ಸಚಿವರಾದ ಬಸವರಾಜ ಬೊಮ್ಮಾಯಿ, ಬಿ.ಸಿ. ಪಾಟೀಲ್, ಹಾವೇರಿ ಜಿಲ್ಲಾಧಿಕಾರಿ ಸಂಜಯ್ ಮೊದಲಾದವರು ಭಾಗಿಯಾಗಿದ್ದಾರೆ.