ಹಾವೇರಿ: ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಹತ್ತಿಮತ್ತೂರು ಗ್ರಾಮದಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ಸಾರ್ವಜನಿಕರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಶನಿವಾರ ಘಟನೆ ನಡೆದಿದೆ. ಆರೋಪಿ ಕಮಾಲ್ ಸಾಬ್(60) ಹಿಟ್ಟಿನ ಗಿರಣಿ ನಡೆಸುತ್ತಿದ್ದು, ಗಿರಣಿಗೆ ಬಂದಿದ್ದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ನಂತರ ಆಕೆಯನ್ನು ಬೆದರಿಸಿ ಕೂಡಿ ಹಾಕಿ ಹೊರಗೆ ಹೋಗಿದ್ದಾನೆ.
ಆರೋಪಿ ವಾಪಸ್ ಬಂದು ಬಾಗಿಲು ತೆಗೆದಾಗ ಬಾಲಕಿ ಕೂಗಾಡಿದ್ದಾಳೆ. ಆಕೆಯ ಚೀರಾಟ ಕೇಳಿದ ಸಾರ್ವಜನಿಕರು ಧಾವಿಸಿ ಬಂದು ರಕ್ಷಿಸಿದ್ದಾರೆ. ಆರೋಪಿಯನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.