
ಹಾವೇರಿ: ಹಾವೇರಿಯಲ್ಲಿ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪ್ರತಿನಿಧಿಗಳಾಗಿ ಭಾಗವಹಿಸುವವರು ಕಡ್ಡಾಯವಾಗಿ ಕನ್ನಡ ಸಾಹಿತ್ಯ ಪರಿಷತ್ ಸದಸ್ಯರಾಗಿರಬೇಕು ಎಂದು ಪರಿಷತ್ ಅಧ್ಯಕ್ಷ ಮಹೇಶ ಜೋಶಿ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮೇಳನದಲ್ಲಿ ಭಾಗವಹಿಸುವ ಪ್ರತಿನಿಧಿಗಳ ನೋಂದಣಿಗೆ ಆಪ್ ಸಿದ್ಧಪಡಿಸಲಾಗಿದೆ. ಇದರ ಮೂಲಕವೇ ಪ್ರತಿನಿಧಿಗಳು ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಕಸಾಪದಲ್ಲಿ ಮೊದಲು ಸದಸ್ಯತ್ವ ನೋಂದಣಿ ಮಾಡಿಕೊಂಡು ಸಮ್ಮೇಳನಕ್ಕೆ ಪ್ರತಿನಿಧಿಯಾಗಲು ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ ಎಂದರು.
ಡಿಸೆಂಬರ್ 1 ರಂದು ಆಪ್ ಬಿಡುಗಡೆ ಮಾಡಲು ನಿರ್ಧರಿಸಲಾಗಿದ್ದು, ಡಿಸೆಂಬರ್ 18ರವರೆಗೆ ನೋಂದಣಿಗೆ ಅವಕಾಶವಿದೆ. 500 ರೂಪಾಯಿ ಪ್ರತಿನಿಧಿ ಶುಲ್ಕ ನಿಗದಿಪಡಿಸಲಾಗಿದೆ ಎಂದು ಹೇಳಿದ್ದಾರೆ.