alex Certify ಶಿವರಾತ್ರಿ ದಿನವೇ ಘರ್ಷಣೆ: 8 ಮಂದಿಗೆ ಚಾಕು ಇರಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವರಾತ್ರಿ ದಿನವೇ ಘರ್ಷಣೆ: 8 ಮಂದಿಗೆ ಚಾಕು ಇರಿತ

ಹಾವೇರಿ: ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಕಮಲಾನಗರ ತಡಸ ತಾಂಡಾದಲ್ಲಿ ಕ್ಷುಲ್ಲಕ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು 8 ಜನರಿಗೆ ಚಾಕುವಿನಿಂದ ಇರಿಯಲಾಗಿದೆ.

ಯುವಕನೊಬ್ಬ 8 ಮಂದಿಗೆ ಚಾಕುವಿನಿಂದ ಇರಿದಿದ್ದಾನೆ. ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಯುವಕನೊಬ್ಬ ಚಾಕು ಇರಿದಿದ್ದರಿಂದ ಎಂಟು ಜನ ಗಾಯಗೊಂಡಿದ್ದಾರೆ. ಒಬ್ಬನ ಸ್ಥಿತಿ ಗಂಭೀರವಾಗಿದೆ.

ರವಿ, ಶಂಕರ ಲಮಾಣಿ, ರಾಜು ಲಮಾಣಿ, ಮಹೇಶ, ಲಾಲಪ್ಪ, ಹನುಮಂತ ಪೂಜಾರಿ, ಅಕ್ಷಯ್ ಅವರಿಗೆ ಚಾಕುವಿನಿಂದ ಇರಿಯಲಾಗಿದೆ, ಗಾಯಾಳುಗಳನ್ನು ಹುಬ್ಬಳ್ಳಿಯ ಸ್ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿಗ್ಗಾಂವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...