ಬೆಂಗಳೂರು : ರಾಜ್ಯದ ಹಲವು ಕಡೆ ಮುಂಗಾರು ಚುರುಕಾಗಿದ್ದು, ಹಲವು ಕಡೆ ಮಳೆಯ ಕೊರತೆ ಇದೆ. ಹಾವೇರಿ ಜಿಲ್ಲೆಯಲ್ಲಿ ಮಳೆ ಕೊರತೆ ಹಿನ್ನೆಲೆ ಮೋಡ ಬಿತ್ತನೆಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.
ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ರಾಣೇಬೆನ್ನೂರು ಶಾಸಕ ಪ್ರಕಾಶ್ ಕೋಳಿವಾಡ ಹಿಂದೆಯೂ ನಮ್ಮ ಜಿಲ್ಲೆಯಲ್ಲಿ ನಾವು ಮೋಡ ಬಿತ್ತನೆ ಮಾಡಲಾಗಿತ್ತು. ಮೋಡ ಬಿತ್ತನೆಯಿಂದ ಮಳೆಯಾಗಿದೆ. ನಮ್ಮ ಜಿಲ್ಲೆಯ ರೈತರಿಗಾಗಿ ಮೋಡ ಬಿತ್ತನೆಯನ್ನ ಮಾಡುತ್ತಿದ್ದೇವೆ ಎಂದರು. ಕೇಂದ್ರ ವಿಮಾನಯಾನ ಇಲಾಖೆಯ ಅನುಮತಿ ಪಡೆದುಕೊಳ್ಳಲು NGO ಟೀಂ ದೆಹಲಿಗೆ ತೆರಳಿದ್ದಾರೆ. ಮೋಡ ಬಿತ್ತನೆಗೆ ಜಿಲ್ಲಾಧಿಕಾರಿ ಮತ್ತು ಕಂದಾಯ ಇಲಾಖೆಯಿಂದ ಅನುಮತಿ ಪಡೆದುಕೊಳ್ಳಲಾಗಿದೆ ಎಂದರು.