ಹಾವೇರಿ: ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ ಎಡವಟ್ಟಿಗೆ ಬಾಲಕ ಪರದಾಡಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.
ಗಾಯಗೊಂಡು ಆಸ್ಪತ್ರೆಗೆ ಬಂದಿದ್ದ ಬಾಲಕನಿಗೆ ಸ್ಟಿಚ್ ಹಾಕುವ ಬದಲು ನರ್ಸ್, ಫೆವಿಕ್ವಿಕ್ ಹಾಕಿ ಚಿಕಿತ್ಸೆ ನೀಡಿದ್ದಾರೆ. ಜನವರಿ 14ರಂದು ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
7 ವರ್ಷದ ಬಾಲಕ ಗುರುಕಿಶನ್ ಅಣ್ಣಪ್ಪ ಹೊಸಮನಿ ಆಟವಡುವಾಗ ಬಿದ್ದು ಗಾಯಗೊಂಡಿದ್ದ. ಬಾಲಕ ಕೆನ್ನೆಗೆ ಗಂಭೀರವಾದ ಗಾಯವಾಗಿತ್ತು. ಕುಟುಂಬದವರು ಬಾಲಕನನ್ನು ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದರು. ಈ ವೇಳೆ ವೈದ್ಯರು ಇಲರಿಲ್ಲ. ಆಸ್ಪತ್ರೆಯಲ್ಲಿದ್ದ ಪಿಹೆಚ್ ಸಿ ನರ್ಸ್, ಬಾಲಕನ ಗಾಯಕ್ಕೆ ಫೆವಿಕ್ವಿಕ್ ಹಚ್ಚಿ ಮೇಲಿಂದ ಬ್ಯಾಂಡೇಜ್ ಟೇಪ್ ಹಚ್ಚಿ ಕಳುಹಿಸಿದ್ದಾಳೆ. ಗಾಯಕ್ಕೆ ಫೆವಿಕ್ವಿಕ್ ಹಚ್ಚಿ ಚಿಕಿತ್ಸೆ ನೀಡಿರುವ ನರ್ಸ್ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಸಸ್ಪೆಂಡ್ ಮಾಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಅದೃಷ್ಟವಶಾತ್ ಬಾಲಕನಿಗೆ ಹೆಚ್ಚಿನ ಸಮಸ್ಯೆಯಾಗಿಲ್ಲ. ಸದ್ಯ ಬಾಲಕ ಗುಣಮುಖನಾಗಿದ್ದಾನೆ ಎಂದು ತಿಳಿದುಬದಿದೆ.