
ಹುಬ್ಬಳ್ಳಿ: ನಾಳೆಯಿಂದ ಹಾವೇರಿಯಲ್ಲಿ 86ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಹಾವೇರಿಯಲ್ಲಿ ಎಕ್ಸ್ ಪ್ರೆಸ್ ರೈಲು ನಿಲ್ದಾಣ ಮಾಡುವಂತೆ ನೈರುತ್ಯ ರೈಲ್ವೆ ಇಲಾಖೆ ಆದೇಶ ಹೊರಡಿಸಿದೆ.
ಈ ಮೂಲಕ ಸಾಹಿತ್ಯ ಆಸಕ್ತರಿಗೆ ನೈರುತ್ಯ ರೈಲ್ವೆ ಇಲಾಖೆಯಿಂದ ಗುಡ್ ನ್ಯೂಸ್ ನೀಡಲಾಗಿದೆ. 7 ರೈಲು ನಿಲ್ದಾಣ ಮಾಡಲು ನೈರುತ್ಯ ರೈಲ್ವೆ ಇಲಾಖೆ ಆದೇಶ ಹೊರಡಿಸಿದೆ. ನಾಳೆಯಿಂದ ಮೂರು ದಿನಗಳ ಕಾಲ 86ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಅಪಾರ ಸಂಖ್ಯೆಯ ಜನ ಭಾಗವಹಿಸಲಿರುವ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಎಕ್ಸ್ ಪ್ರೆಸ್ ನಿಲ್ದಾಣ ಮಾಡಲು ಕ್ರಮ ಕೈಗೊಂಡಿದೆ.