alex Certify BIG NEWS: ದೇವಸ್ಥಾನದ ಕಳಸಾರೋಹಣದ ವೇಳೆ ದುರಂತ: ಕ್ರೇನ್ ನಿಂದ ಬಿದ್ದು ವ್ಯಕ್ತಿ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೇವಸ್ಥಾನದ ಕಳಸಾರೋಹಣದ ವೇಳೆ ದುರಂತ: ಕ್ರೇನ್ ನಿಂದ ಬಿದ್ದು ವ್ಯಕ್ತಿ ದುರ್ಮರಣ

ಹಾವೇರಿ: ದೇವಸ್ಥಾನದ ಕಳಸಾಹೋರನಹಣದ ವೇಳೆ ದುರಂತ ಸಂಭವಿಸಿದ್ದು, ಕ್ರೇನ್ ನಿಂದ ಬಿದ್ದು ವ್ಯಕ್ತಿಯೋರ್ವರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಶೇಷಗಿರಿ ಗ್ರಾಮದಲ್ಲಿ ನಡೆದಿದೆ.

ಮಂಜುನಾಥ್ ಪಾಟೀಲ್ (42) ಮೃತ ದುರ್ದೈವಿ. ಶೇಷಗಿರಿ ಗ್ರಾಮದಲ್ಲಿ ಗಂಗಾಪರಮೇಶ್ವರಿ ದೇವಸ್ಥಾನದ ಕಳಸಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಂಜುನಾಥ್ ಹಾಗೂ ಇನ್ನೋರ್ವ ವ್ಯಕ್ತಿ ಕ್ರೇನ್ ಮುಂಭಾಗದ ಬುಟ್ಟಿಯಲ್ಲಿ ಹತ್ತಿ ಗೋಪುರಕ್ಕೆ ಕಳಸ ಇರಿಸಲು ಮುಂದಾಗಿದ್ದರು. ಈ ವೇಳೆ ಕ್ರೇನ್ ಬುಟ್ಟಿ ಏಕಾಏಕಿ ಕಳಚಿ ಬಿದ್ದಿದೆ. ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದರು.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮಂಜುನಾಥ್ ತಲೆಗೆ ಗಂಭೀರವಾಗಿ ಪೆಟ್ಟುಬಿದ್ದ ಪರಿಣಾಮ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...