
ಹಾವೇರಿ: ಪಟಾಕಿ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ನೋಡ ನೋಡುತ್ತಿದ್ದಂತೆ ಪಟಾಕಿ ಅಂಗಡಿಯೇ ಹೊತ್ತಿ ಉರಿದಿರುವ ಘಟನೆ ಹಾವೇರಿ ಜಿಲ್ಲೆಯ ಆಲದಕಟ್ಟೆ ಬಳಿ ನಡೆದಿದೆ.
ಬೆಂಕಿ ಅವಘಡದಲ್ಲಿ ಕ್ಷಣಾರ್ಧದಲ್ಲಿ ಮೂರು ಲೋಡ್ ಪಟಾಕಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಕುಮಾರ್ ಸಾತೇನಹಳ್ಳಿ ಮಾಲೀಕತ್ವದ ಪಟಾಕಿ ಅಂಗಡಿಯಲ್ಲಿ ಈ ಅವಘಡ ಸಂಭವಿಸಿದೆ.
ಪಟಾಕಿ ಅಂಗಡಿಯ ಪಕ್ಕದಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದಾಗ ಬೆಂಕಿಯ ಕಿಡಿ ಪಟಾಕಿ ಅಂಗಡಿಯಲ್ಲಿನ ಪಟಾಕಿಗೆ ತಗುಲಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಪಟಾಕಿ ಶಬ್ದಕ್ಕೆ ಜನರು ಕಂಗಾಲಾಗಿ ಓಡಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.