ಹಾವೇರಿ: ಶಾಲಾ ಮಕ್ಕಳಿಗೆ ನೀಡಲಾಗುತ್ತಿದ್ದ ಬಿಸಿಯೂಟಕ್ಕೆ ಹಲವು ಶಾಲೆಗಳಿಗೆ ರೇಷನ್ ಪೂರೈಕೆಯಾಗುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಹಾವೇರಿ ಜಿಲ್ಲೆಯ ಬಹುತೇಕ ಶಾಲೆಗಳಲ್ಲಿ ಬಿಸಿಯೂಟ ತಯಾರಿಗೂ ಸಮಸ್ಯೆ ಎದುರಾಗಿದೆ.
ರೇಷನ್ ಪೂರೈಕೆಯಲ್ಲಿ ವ್ಯತ್ಯಾಸವಾಗುತ್ತಿರುವುದಕ್ಕೆ ಹಾವೇರಿ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಶಾಲೆಯಲ್ಲಿ ನೀಡಲಾಗುತ್ತಿದ್ದ ಮಧ್ಯಾಹ್ನದ ಬಿಸಿಯೂಟ ಸ್ಥಗಿತಗೊಳಿಸಲಾಗಿದೆ.
ಕಳೆದ 20 ದಿನಗಳಿಂದ ಬಿಸಿಯೂಟ ರೇಷನ್ ಪೂರೈಕೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಮನೆಯಿಂದ ಊಟ ತರುವಂತೆ ವಿದ್ಯಾರ್ಥಿಗಳು ಶಿಕ್ಷಕರಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ಆಗಸ್ಟ್ ತಿಂಗಳಲ್ಲಿ ಬರಬೇಕಿದ್ದ ರೇಷನ್ ಇಷ್ಟುದಿನವಾದರೂ ಬಂದಿಲ್ಲ. ಅಕ್ಕಿ, ಬೇಳೆ ಸಪ್ಲೈ ಆಗುತ್ತಿಲ್ಲ. ಕೆಲವೆಡೆ ಶಿಕ್ಷಕರು ಅಂಗಡಿಗಳಿಂದ ರೇಷನ್ ಖರೀದಿಸಿ ತಂದು ಬಿಸಿಯೂಟ ತಯಾರಿ ಮಾಡುತ್ತಿದ್ದಾರೆ. ಶಾಲೆಯಲ್ಲಿ ಬಿಸಿಯೂಟಕ್ಕೆ ರೇಷನ್ ಪೂರೈಕೆಯಾಗದ ಕಾರಣ ಶಿಕ್ಷಕರು, ವಿದ್ಯಾರ್ಥಿಗಳು ಪರದಾಡುವಂತಾಗಿದೆ.