alex Certify ಬೆಳಗಿನಜಾವ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಳಗಿನಜಾವ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಹಾವೇರಿ: ಖಾಸಗಿ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಹಾವೇರಿ ತಾಲೂಕಿನ ವರದಾಹಳ್ಳಿ ಸಮೀಪ ನಡೆದಿದೆ.

ಬೆಂಗಳೂರಿನಿಂದ ಹುಬ್ಬಳ್ಳಿ ಮಾರ್ಗವಾಗಿ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಹಾವೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಮುಂಜಾನೆ 4 ಗಂಟೆಗೆ ಅಪಘಾತ ಸಂಭವಿಸಿದೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...