alex Certify ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಆಘಾತಕಾರಿ ಮಾಹಿತಿ: ಪ್ರಿಯಕರನ ಜೊತೆ ಸೇರಿ ಗಂಡನ ಜೀವ ತೆಗೆದ ಪತ್ನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಆಘಾತಕಾರಿ ಮಾಹಿತಿ: ಪ್ರಿಯಕರನ ಜೊತೆ ಸೇರಿ ಗಂಡನ ಜೀವ ತೆಗೆದ ಪತ್ನಿ

ಹಾವೇರಿ: ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಅಡವಿಸೋಮಾಪುರದಲ್ಲಿ ಪತ್ನಿಯೇ ಪ್ರಿಯಕರನೊಂದಿಗೆ ಪತಿ ಕೊಲೆ ಮಾಡಿದ ಘಟನೆ ನಡೆದಿದೆ.

ಸಕ್ರಪ್ಪ ಲಮಾಣಿ(40) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಕೊಲೆ ಆರೋಪಿ ಸುರೇಶ್ ಎಂದು ಗುರುತಿಸಲಾಗಿದೆ. ಸಕ್ರಪ್ಪನ ಪತ್ನಿ ಶೀಲವ್ವ ಮತ್ತು 7 ಜನ ಕೃತ್ಯವೆಸಗಿದ್ದಾರೆ ಎಂದು ಹೇಳಲಾಗಿದೆ.

ಆ. 25 ರಂದು ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಹಳ್ಳದ ಬಳಿ ಸುಟ್ಟ ಸ್ಥಿತಿಯಲ್ಲಿ ಮೃತದೇಹವೊಂದು ಪತ್ತೆಯಾಗಿತ್ತು. ದೇಹದ ಭಾಗವೆಲ್ಲ ಸುಟ್ಟಿದ್ದು ಕಾಲುಗಳು ಮಾತ್ರ ಇದ್ದವು. ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ಮಾಹಿತಿ ಕಲೆ ಹಾಕಿದ್ದರು. ಆದರೆ, ಸುಳಿವು ಪತ್ತೆಯಾಗಿರಲಿಲ್ಲ.

ನಾಪತ್ತೆ ಪ್ರಕರಣಗಳ ಪರಿಶೀಲನೆ ಆಧರಿಸಿ ತನಿಖೆ ಕೈಗೊಂಡ ಪೊಲೀಸರು ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸುವರ್ಣಗಿರಿ ತಾಂಡಾದ ಸಕ್ರಪ್ಪ ನಾಪತ್ತೆಯಾಗಿರುವ ಬಗ್ಗೆ ತನಿಖೆ ನಡೆಸಿದ್ದಾರೆ. ತನಿಖೆ ಮುಂದುವರೆಸಿದಾಗ ಶಿಗ್ಗಾಂವಿ ತಾಲೂಕಿನ ನೀರಲಗಿ ಗ್ರಾಮದ ಸುರೇಶ್ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ.

ಸುರೇಶ್ ಮತ್ತು ಸಕ್ರಪ್ಪನ ಪತ್ನಿ ಶೀಲವ್ವ ನಡುವೆ ಅಕ್ರಮ ಸಂಬಂಧವಿದ್ದು, ಸಕ್ರಪ್ಪ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಕೊಲೆ ಮಾಡಿದ್ದಾರೆ. ಮದ್ಯಸೇವನೆ ಮಾಡಿದ ನಂತರ ಕೊಡಲಿಯಿಂದ ಹೊಡೆದು ಕೊಲೆ ಮಾಡಿ ಬಳಿಕ ಮೃತ ದೇಹವನ್ನು ಕಾಲುವೆ ಬಳಿ ಎಸೆದು ಹೋಗಿದ್ದಾರೆ. ಮರುದಿನ 7 ಜನ ಆರೋಪಿಗಳು ಸೇರಿಕೊಂಡು ಶವಕ್ಕೆ ಟೈರ್ ಸುತ್ತಿ ಪೆಟ್ರೋಲ್ ಸುರಿದು ಸುಟ್ಟು ಹಾಕಿದ್ದಾರೆ. ಆದರೆ ಕಾಲುಗಳು ಸುಟ್ಟಿರಲಿಲ್ಲ. ಗಾಯದ ಗುರುತು ಆಧರಿಸಿ ಸಂಬಂಧಿಕರು ಮೃತದೇಹ ಸಕ್ರಪ್ಪನದು ಎಂದು ಖಚಿತಪಡಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...