ಬೆಳಗಾವಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಮತ್ತು ಅವರ ಇಡೀ ಕುಟುಂಬ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿ ರಾಜಕೀಯ ಬಿಡಬೇಕು ಎಂದು ಮಾಜಿ ಮುಖ್ಯಮಂತ್ರಿ ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಡಿಯೋ ಬಿಡುಗಡೆಯಲ್ಲಿ ಯಾರ ಪಾತ್ರವಿದೆ ಎನ್ನುವುದು ಮುಖ್ಯವಲ್ಲ. ತಪ್ಪು ಯಾರು ಮಾಡಿದ್ದಾರೆ ಎನ್ನುವುದು ಮುಖ್ಯ. ಇದು ಸಮಾಜವೇ ತಲೆ ತಗ್ಗಿಸುವ ಕೆಲಸವಾಗಿದೆ. ದೇವೇಗೌಡರ ಕುಟುಂಬ ನೈತಿಕ ಹೊಣೆ ಹೊರಬೇಕು ಎಂದು ಹೇಳಿದ್ದಾರೆ.