ಬೆಂಗಳೂರು: ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಇಂದು ಬೆಳಿಗ್ಗೆ 10.30 ಕ್ಕೆ ಹೆಚ್.ಡಿ. ದೇವೇಗೌಡರು ದಾಖಲಾಗಿದ್ದಾರೆ.
ಮಂಡಿ ನೋವಿನ ಸಮಸ್ಯೆ ಹಿನ್ನೆಲೆಯಲ್ಲಿ ದೇವೇಗೌಡರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಬೆಳಗ್ಗೆ ಅವರು ಜನರಲ್ ಚೆಕಪ್ ಗೆ ತೆರಳಿದ್ದರು. ಒಂದು ವಾರ ವಿಶ್ರಾಂತಿ ಪಡೆಯಲು ವೈದ್ಯರು ಸೂಚನೆ ನೀಡಿದ್ದಾರೆ. ವೈದ್ಯರ ಸೂಚನೆ ಮೇರೆಗೆ ದೇವೇಗೌಡರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ಮುಂದುವರೆದಿದೆ.