alex Certify ‘ಕುಮಾರಸ್ವಾಮಿ ಸಿಎಂ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಕುಮಾರಸ್ವಾಮಿ ಸಿಎಂ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ’

ಬೆಂಗಳೂರು: ನನ್ನ ಕಣ್ಣೆದುರೇ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವುದು ಸತ್ಯ ಎಂದು ಪಕ್ಷದ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹೇಳಿದ್ದಾರೆ.

ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆದ ಜೆಡಿಎಸ್ ಜನತಾ ಮಿತ್ರ ಸಮಾವೇಶದಲ್ಲಿ ಮಾತನಾಡಿದ ಅವರು, ಹೆಚ್.ಡಿ. ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಜೆಡಿಎಸ್ ಪಕ್ಷವನ್ನು ಉಳಿಸಲು ಕುಮಾರಸ್ವಾಮಿ ಏನೇನು ಮಾಡಿದ್ದಾರೆ ಎಂದು ಗೊತ್ತಿದೆ. ನನ್ನ ಆರೋಗ್ಯ ಮತ್ತಷ್ಟು ಸುಧಾರಣೆಯಾಗುವ ವಿಶ್ವಾಸ ಇದೆ. ನಾನು ಮುಂದಿನ ದಿನಗಳಲ್ಲಿ ಅನೇಕ ಕೇಂದ್ರಗಳಿಗೆ ಭೇಟಿ ನೀಡುತ್ತೇನೆ. ನನಗೆ ಇನ್ನೂ ಹೋರಾಟ ಮಾಡುವ ಶಕ್ತಿ ಇದೆ. ಹಿಂದಿನ ವಿಚಾರಗಳನ್ನು ಮಾತನಾಡಲು ಇಷ್ಟಪಡುವುದಿಲ್ಲ. ಈ ಪಕ್ಷವನ್ನು ಉಳಿಸಿ ಬೆಳೆಸಿ ಎಂದು ಕೈ ಮುಗಿದು ಮನವಿ ಮಾಡುತ್ತೇನೆ ಎಂದು ದೇವೇಗೌಡರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...