alex Certify BIG NEWS: ತುಮಕೂರಿನಿಂದ ಮತ್ತೆ HDD ಸ್ಪರ್ಧೆ ಬಗ್ಗೆ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ತುಮಕೂರಿನಿಂದ ಮತ್ತೆ HDD ಸ್ಪರ್ಧೆ ಬಗ್ಗೆ ಘೋಷಣೆ

ತುಮಕೂರು: ಮುಂದಿನ ಲೋಕಸಭೆ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹೇಳಿದ್ದಾರೆ.

ತುಮಕೂರು ಜಿಲ್ಲೆ ಪಾವಗಡದಲ್ಲಿ ವಿಧಾನಪರಿಷತ್ ಚುನಾವಣೆ ಅಂಗವಾಗಿ ಪ್ರಚಾರ ಕೈಗೊಂಡಿದ್ದ ಅವರು ಮಾತನಾಡಿ, ಪಕ್ಷ ಉಳಿಸಲು, ಸಂಘಟಿಸಲು ರಾಜ್ಯದಲ್ಲಿ ಪ್ರವಾಸ ಕೈಗೊಳ್ಳುತ್ತೇನೆ. 2023 ರ ಚುನಾವಣೆ ಬಳಿಕ ಕುಮಾರಸ್ವಾಮಿ ಮುಖ್ಯಮಂತ್ರಿ ಆಗುತ್ತಾರೆ ಇಲ್ಲವೇ ಎನ್ನುವುದು ಗೊತ್ತಿಲ್ಲ. ನಾನು 2024 ರಲ್ಲಿ ತುಮಕೂರು ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುವೆ ಎಂದು ದೇವೇಗೌಡರು ತಿಳಿಸಿದ್ದಾರೆ.

ನನಗೆ 89 ವರ್ಷ. ನನ್ನ ಹೋರಾಟದ ಶಕ್ತಿ ಕಡಿಮೆಯಾಗಿಲ್ಲ. ಪಕ್ಷ ಸಂಘಟನೆಗೆ ರಾಜ್ಯ ಪ್ರವಾಸ ಕೈಗೊಳ್ಳುತ್ತೇನೆ. ನಾನು ಮತ್ತು ನನ್ನ ಮಗ ಮಾತ್ರ ಪಕ್ಷ ಉಳಿಸಲು ಸಾಧ್ಯವಿಲ್ಲ. ಪಕ್ಷ ಎಂದರೆ ನಾವಿಬ್ಬರೇ ಅಲ್ಲ ಎಂದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...