ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಬೆದರಿಕೆ ಆರೋಪದಡಿ ಎಡಿಜಿಪಿ ಚಂದ್ರಶೇಖರ್ ದೂರು ದಾಖಲಿಸಿದ್ದಾರೆ.
ಸಂಜಯನಗರ ಠಾಣೆಗೆ ದೂರು ನೀಡಲಾಗಿದೆ. ಕುಮಾರಸ್ವಾಮಿ, ನಿಖಿಲ್, ಸುರೇಶ್ ಬಾಬು ವಿರುದ್ಧ ದೂರು ನೀಡಲಾಗಿದೆ. ಕುಮಾರಸ್ವಾಮಿ ವಿರುದ್ಧ ಗಣಿಗಾರಿಕೆ ಪ್ರಕರಣದ ತನಿಖೆಗೆ ಪ್ರಾಸಿಕ್ಯೂಷನ್ ಕೋರಿ ಎಡಿಜಿಪಿ ಚಂದ್ರಶೇಖರ್ ಮನವಿ ಮಾಡಿದ್ದರು. ಇದು ಸುಳ್ಳು ಆರೋಪವೆಂದು ಕುಮಾರಸ್ವಾಮಿ ಹೇಳಿ ಬೇರೆ ರಾಜ್ಯಕ್ಕೆ ವರ್ಗಾವಣೆ ಮಾಡಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಚಂದ್ರಶೇಖರ್ ದೂರು ನೀಡಿದ್ದಾರೆ.
ಹೆಚ್.ಡಿ.ಕೆ. ವಿರುದ್ಧದ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿದ್ದಕ್ಕೆ ಬೇರೆ ರಾಜ್ಯಕ್ಕೆ ವರ್ಗಾವಣೆ ಮಾಡಿಸುವ ಬೆದರಿಕೆ ಹಾಕಿದ್ದಾರೆ ಎಂದು ದೂರು ನೀಡಲಾಗಿದೆ. ಹೆಚ್.ಡಿ. ಕುಮಾರಸ್ವಾಮಿ, ನಿಖಿಲ್, ಸುರೇಶ್ ಬಾಬು ವಿರುದ್ಧ ಸಂಜಯನಗರ ಠಾಣೆಯಲ್ಲಿ ಎನ್.ಸಿ.ಆರ್. ದಾಖಲು ಮಾಡಿಕೊಳ್ಳಲಾಗಿದೆ.