ಬೆಂಗಳೂರು : ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿಎಂ ಇಬ್ರಾಹಿಂ ಅವರನ್ನು ಉಚ್ಚಾಟನೆ ಮಾಡಲಾಗಿದ್ದು, ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ.
ಕೋರ್ ಕಮಿಟಿ ಸಭೆ ಬಳಿಕ ಮಾತನಾಡಿದ ಪಕ್ಷದ ವರಿಷ್ಠ ಹೆಚ್ಡಿ ದೇವೇಗೌಡ, ಹಿಂದಿನ ಅಧ್ಯಕ್ಷರ ಹೇಳಿಕೆಯನ್ನು ನಾನು ಪ್ರಸ್ತಾಪ ಮಾಡುವುದಿಲ್ಲ. ಜೆಡಿಎಸ್ ಕೋರ್ ಕಮಿಟಿ ಸದಸ್ಯರ ಸಭೆ ಕರೆದು ಚರ್ಚೆ ನಡೆಸಿದ್ದೇವೆ. ಎಲ್ಲರ ಅಭಿಪ್ರಾಯ ಪಡೆದು ಸಿ.ಎಂ.ಇಬ್ರಾಹಿಂ ಉಚ್ಚಾಟಿಸಿದ್ದೇವೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕುಮಾರಸ್ವಾಮಿ ನೇಮಕ ಮಾಡಿದ್ದೇವೆ ಎಂದರು.
ಕೆಲವು ಪಕ್ಷದ ನಿಯಮಾವಳಿಗಳು ಕೂಡ ಇದ್ದಾವೆ. ಪಕ್ಷದ ಕೆಲವು ಘಟಕಗಳ ಜೊತೆ ಸಮಾಲೋಚನೆ ಮಾಡಿ ಒಂದು ನಿರ್ಣಯ ಮಾಡಿದ್ದೇವೆ. ಚುನಾವಣೆ ಮುಗಿದು ನಾಲ್ಕು ತಿಂಗಳಾಯ್ತು. ಎಲ್ಲವನ್ನೂ ಗಮನಕ್ಕೆ ತೆಗೆದುಕೊಂಡಿದ್ದೇವೆ ಎಂದರು.ಇಬ್ರಾಹಿಂ ಅವರ ಹೇಳಿಕೆಗಳನ್ನು ನಾನು ಪ್ರಸ್ತಾಪ ಮಾಡಲು ಹೋಗಲ್ಲ, . ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕುಮಾರಸ್ವಾಮಿ ನೇಮಕ ಮಾಡಿದ್ದೇವೆ ಎಂದರು.