ರಾಯಚೂರು: ಸಮಯಕ್ಕೆ ಸರಿಯಾಗಿ ಬಸ್ ಬಾರದ ಕಾರಣ ವಿದ್ಯಾರ್ಥಿಗಳು ಕಣ್ಣೀರು ಹಾಕಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಎದುರು ಶಾಲಾ ಮಕ್ಕಳು ಕಣ್ಣೀರು ಹಾಕಿದ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಹಳ್ಳಿಹೊಸೂರಿನಲ್ಲಿ ನಡೆದಿದೆ.
ಪಂಚರತ್ನ ರಥಯಾತ್ರೆ ವೇಳೆ ಕಣ್ಣೀರು ಹಾಕಿದ ಮಕ್ಕಳು ಕುಮಾರಸ್ವಾಮಿಗೆ ಮನವಿ ಸಲ್ಲಿಸಿದ್ದಾರೆ. ನಾವು ಬಡವರ ಮಕ್ಕಳು, ಸರ್ ನಮಗೆ ವಿದ್ಯೆ ಕಲಿಯುವ ಆಸೆ ಇದೆ. ಸಮಯಕ್ಕೆ ಸರಿಯಾಗಿ ಬಸ್ ಬಾರದ ಕಾರಣ ಸಮಸ್ಯೆಯಾಗುತ್ತಿದೆ ಎಂದು ಹೇಳಿದ್ದಾರೆ. ವಿದ್ಯಾರ್ಥಿನಿಯರ ಕಣ್ಣೀರಿಗೆ ಸ್ಪಂದಿಸಿದ ಕುಮಾರಸ್ವಾಮಿ ಮಕ್ಕಳ ಶಾಲಾ, ಕಾಲೇಜಿನ ಸಮಯಕ್ಕೆ ಸರಿಯಾಗಿ ಬಸ್ ಸೌಲಭ್ಯ ಕಲ್ಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.