ಚನ್ನಪಟ್ಟಣದಲ್ಲಿ ಶಾಸಕರನ್ನು ಕಡೆಗಣಿಸಿ ಶಿಷ್ಟಾಚಾರ ಉಲ್ಲಂಘನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪತ್ರ ಬರೆದಿದ್ದಾರೆ.
ಶಾಸಕರನ್ನು ಕಡೆಗಣಿಸಿ ಸರ್ಕಾರಿ ಕಾರ್ಯಕ್ರಮ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಶಿಷ್ಟಾಚಾರ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪತ್ರ ಬರೆದಿದ್ದಾರೆ. ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮತ್ತು ಇತರೆ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಹೆಚ್.ಡಿ.ಕೆ. ಆಗ್ರಹಿಸಿದ್ದಾರೆ.