ನೆಲಮಂಗಲದಲ್ಲಿ ಸಾರಿಗೆ ನೌಕರನ ಪತ್ನಿ ಮತ್ತು ಮಕ್ಕಳ ಆತ್ಮಹತ್ಯೆ ಪ್ರಕರಣ ಹೃದಯವಿದ್ರಾವಕ. ಈ ಘಟನೆಯನ್ನು ಸರ್ಕಾರ ತಡೆಯಬಹುದಿತ್ತು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಮೊದಲ ಕುಟುಂಬಕ್ಕೆ ಪರಿಹಾರ ಅನುಕಂಪದ ಉದ್ಯೋಗ ನೀಡಿದ್ದರೆ ಮೂರು ಅಮೂಲ್ಯ ಜೀವ ಉಳಿಯುತ್ತಿದ್ದವು. ಇದು ಕೊಲೆಗಡುಕ ಸರ್ಕಾರ ಎಂದು ಟೀಕಿಸಿದ್ದಾರೆ.
ಸರ್ಕಾರ ಇಂಥವರ ನೆರವಿಗೆ ಧಾವಿಸಬೇಕಿತ್ತು. ಇಂತಹ ಪ್ರಕರಣಗಳ ಇತ್ಯರ್ಥಕ್ಕೆ ಮೊದಲ ಆದ್ಯತೆ ನೀಡಬೇಕಿತ್ತು. ಆದರೆ, ರಾಜ್ಯ ಸರ್ಕಾರ ಪೂರ್ಣ ವಿಫಲವಾಗಿದೆ. ಅಧಿಕಾರಿಗಳ ಹೊಣೆಗೇಡಿತನ ಎದ್ದು ಕಾಣುತ್ತಿದೆ ಎಂದು ಆರೋಪಿಸಿದ್ದಾರೆ.
ಕೂಡಲೇ ಸಂಬಂಧಿಸಿದ ಎಲ್ಲಾ ಅಧಿಕಾರಿಗಳನ್ನು ಅಮಾನತು ಮಾಡಬೇಕು. ಮುಖ್ಯಮಂತ್ರಿಗಳ ಈ ಬಗ್ಗೆ ಗಮನಹರಿಸಿ ಕೊರೋನಾ ಸೋಂಕಿಗೆ ಬಲಿಯಾದ ಸಾರಿಗೆ ನೌಕರರ ಕುಟುಂಬಗಳಿಗೆ ನೆರವಾಗಬೇಕು. ಮುಂದಿನ ಅನಾಹುತಗಳನ್ನು ತಪ್ಪಿಸಬೇಕು ಎಂದು ಮುಖ್ಯಮಂತ್ರಿಯವರಿಗೆ ಒತ್ತಾಯಿಸಿದ್ದಾರೆ.