
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಹಗರಣದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಭೂಕಬಳಿಕೆ ಆರೋಪ ಮಾಡಲಾಗಿದೆ.
ಕೇಂದ್ರದ ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸಿಎಂ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಅಂಗವಿಕಲ ದಲಿತರೊಬ್ಬರ ಜಾಗದಲ್ಲಿ ಸಿದ್ದರಾಮಯ್ಯ ಮನೆ ನಿರ್ಮಾಣ ಮಾಡಿದ್ದಾರೆ ಎಂದು ಸಿಎಂ ವಿರುದ್ಧ ಹೊಸ ಭೂಕಬಳಿಕೆ ಅಸ್ತ್ರ ಪ್ರಯೋಗಿಸಿದ್ದಾರೆ.
ಸಿದ್ದರಾಮಯ್ಯ ಉಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಅಂಗವಿಕಲ ದಲಿತರೊಬ್ಬರ ಜಾಗದಲ್ಲಿ ಮನೆ ಕಟ್ಟಿದ್ದರು. ಮುಡಾದಿಂದ ಹಂಚಿಕೆಯಾಗಿದ್ದ ದಲಿತರೊಬ್ಬರ ನಿವೇಶನ ಕಬಳಿಸಿ ಮನೆ ನಿರ್ಮಿಸಿದ್ದಾರೆ. ನಂತರ ಮನೆಯನ್ನು ಮಾರುವ ನಾಟಕವಾಡಿ ಸಿಕ್ಕಿಬಿದ್ದಿದ್ದು, ಈ ಕುರಿತ ದಾಖಲೆಗಳು ನನ್ನ ಬಳಿ ಇವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.