ಬೆಂಗಳೂರು: ವಿದ್ಯಾರ್ಥಿನಿಯರಿಗೆ ಎಲೆಕ್ಟ್ರಿಕ್ ಮೊಪೈಡ್, ವರ್ಷಕ್ಕೆ 5 ಸಿಲಿಂಡರ್ ಉಚಿತವಾಗಿ ನೀಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.
ಪಂಚರತ್ನ ರಥಯಾತ್ರೆ ವೇಳೆ ಮಾತನಾಡಿದ ಅವರು, ಜೆಡಿಎಸ್ ಅಧಿಕಾರಕ್ಕೆ ಬಂದರೆ ಬಡ ಹೆಣ್ಣು ಮಕ್ಕಳ ಕಣ್ಣೀರಿಗೆ ಶಾಶ್ವತ ಪರಿಹಾರ ನೀಡಲಾಗುವುದು. ಕೇಂದ್ರದ ದುರಾಡಳಿತದಿಂದ ಸಿಲಿಂಡರ್ ಬೆಲೆ ಗಗನಕ್ಕೇರಿದೆ. ವರ್ಷಕ್ಕೆ 5 ಎಲ್ಪಿಜಿ ಸಿಲಿಂಡರ್ ಉಚಿತವಾಗಿ ನೀಡಲಾಗುತ್ತದೆ. ವಿದ್ಯಾರ್ಥಿನಿಯರಿಗೆ ಉಚಿತವಾಗಿ ಎಲೆಕ್ಟ್ರಿಕ್ ಮೊಪೈಡ್ ದ್ವಿಚಕ್ರವಾಹನ ನೀಡಲಾಗುವುದು ಎಂದು ಘೋಷಿಸಿದ್ದಾರೆ.