ಧಾರವಾಡ: ಭಾರತ ಸರ್ಕಾರದ ಕೃಷಿ ಮಂತ್ರಾಲಯ ವತಿಯಿಂದ ಪಿಎಂ ಕಿಸಾನ್ ಸಮ್ಮಾನ್ ನಿಧಿಯ 17ನೇ ಕಂತಿನ ಹಣ ಬಿಡುಗಡೆ ಕಾರ್ಯಕ್ರಮವನ್ನು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಜೂ. 18ರಂದು ಸಂಜೆ 4 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಯೋಜನೆಯ ಹಣ ಬಿಡುಗಡೆ ಮಾಡಲಿದ್ದಾರೆ. ಇದರ ಅಂಗವಾಗಿ ದೇಶದ 50 ಕೃಷಿ ವಿಜ್ಞಾನ ಕೇಂದ್ರಗಳಲ್ಲಿ ನೇರ ಪ್ರಸಾರ ನಡೆಯಲಿದೆ. ರಾಜ್ಯದಲ್ಲಿ ಧಾರವಾಡ ಕೃಷಿ ವಿವಿ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ನೇರ ಪ್ರಸಾರ ಆಯೋಜಿಸಲಾಗಿದ್ದು, ಕಾರ್ಯಕ್ರಮದಲ್ಲಿ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ ಭಾಗವಹಿಸಲಿದ್ದಾರೆ. ಇದೇ ವೇಳೆ ಅಗ್ರಿ ಸ್ಟ್ಯಾಕ್ ಮತ್ತು ಕೃಷಿ ಇಲಾಖೆ ಎಂಬ ಹೊಸ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.