
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ಮುಂದುವರೆಸಿದ್ದು, ಕಾಂಗ್ರೆಸ್ ನಾಯಕರಿಗೆ ತುರಿಕೆ ಶುರುವಾಗಿದೆ ಹಾಗಾಗಿ ಅವರು ಮೈ ಕೈ ಪರಚಿಕೊಳ್ಳಲಿ ಎಂದು ಕಿಡಿ ಕಾರಿದ್ದಾರೆ.
ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ, ಭ್ರಷ್ಟಾಚಾರದ ಆರೋಪ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಆರೊಗ್ಯ ಸಚಿವ ದಿನೇಶ್ ಗುಂಡೂರಾವ್, ಹೆಚ್ ಡಿಕೆ ಅನಗತ್ಯವಾಗಿ ಆರೋಪ ಮಾಡುತ್ತಾ ಮೈ ಕೈ ಪರಚಿಕೊಳ್ತಿದ್ದಾರೆ ಪರಚಿಕೊಳ್ಳಲಿ ಎಂದು ವಾಗ್ದಾಳಿ ನಡೆಸಿದ್ದರು. ಈಗ ಸಚಿವರ ಹೇಳಿಕೆಗೆ ತಿರುಗೇಟು ನೀಡಿರುವ ಕುಮಾರಸ್ವಾಮಿ, ನಾನ್ಯಾಕೆ ಮೈ ಕೈ ಪರಚಿಕೊಳ್ಳಲಿ? ರಾಜಕೀಯ ತುರಿಕೆ ಶುರುವಾಗಿರುವುದು ಅವರಿಗೆ ಅವರು ಮೈ ಕೈ ಪರಚಿಕೊಳ್ಳಲಿ ಎಂದು ಹೇಳಿದ್ದಾರೆ.
ನಾನು ಅಧಿಕಾರದಲ್ಲಿದ್ದಾಗಲೂ ಜನರ ಸಮಸ್ಯೆಗೆ ಸಂದಿಸಿದ್ದೇನೆ. ಅಧಿಕಾರದಲ್ಲಿ ಇಲ್ಲದಿರುವಾಗಲೂ ಜನರ ಕಷ್ಟ, ನಷ್ಟಗಳಿಗೆ ಸ್ಪಂದಿಸಿದ್ದೇವೆ. ದಿನೇಶ್ ಗುಂಡೂರಾವ್ ಅವರು ನಮಗೆ ಹೇಳುವುದು ಬೇಡ. ಸಮಯ ಬಂದಾಗ ಎಲ್ಲವನ್ನೂ ಬಹಿರಂಗ ಪಡಿಸುತ್ತೇನೆ ಎಂದು ಹೇಳಿದ್ದಾರೆ.