alex Certify ಜೆಡಿಎಸ್ ಪಂಚರತ್ನ ರಥಯಾತ್ರೆ ಪುನರಾರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೆಡಿಎಸ್ ಪಂಚರತ್ನ ರಥಯಾತ್ರೆ ಪುನರಾರಂಭ

ಬೆಂಗಳೂರು: ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಜೆಡಿಎಸ್ ಪಂಚರತ್ನ ರಥಯಾತ್ರೆ ಇಂದಿನಿಂದ ಪುನರಾರಂಭವಾಗಲಿದೆ.

ರಾಮನಗರ ಜಿಲ್ಲೆಯ ಮಾಗಡಿ ವಿಧಾನಸಭಾ ಕ್ಷೇತ್ರದಿಂದ ಪಂಚರತ್ನ ರಥಯಾತ್ರೆ ಆರಂಭವಾಗಲಿದೆ. ಮಾಗಡಿಯ ಶ್ರೀರಂಗನಾಥ ಸ್ವಾಮಿ ದೇವಾಲಯ, ಸೋಮೇಶ್ವರ ದೇವಾಲಯದಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಮಾಗಡಿಯ ಜೆಡಿಎಸ್ ಭವನದಲ್ಲಿ ಬೃಹತ್ ಸಭೆ ನಡೆಯಲಿದೆ.

ನಾಳೆ ಹೆಚ್‍.ಡಿ. ಕುಮಾರಸ್ವಾಮಿ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ರಾಮನಗರದಲ್ಲಿ ಶ್ರೀನಿವಾಸ ಕಲ್ಯಾಣ ಮಹೋತ್ಸವ ಹಮ್ಮಿಕೊಳ್ಳಲಾಗಿದೆ.

ಇಂದು ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಪಕ್ಷದ ಶಾಸಕಾಂಗ ನಾಯಕರಾದ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಶಾಸಕರು, ಚುನಾವಣೆ ಆಕಾಂಕ್ಷಿಗಳ ಸಭೆ ಕರೆಯಲಾಗಿದೆ. ರಾಜಕೀಯ ರಣತಂತ್ರ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಿದ್ದು, ಚುನಾವಣೆಗೆ ಆಕಾಂಕ್ಷಿಗಳು ಕೈಗೊಂಡಿರುವ ಸಿದ್ಧತೆ ಬಗ್ಗೆ ಹೆಚ್‌ಡಿಕೆ ಮಾಹಿತಿ ಪಡೆದುಕೊಂಡು ಅಗತ್ಯ ಸಲಹೆ ಸೂಚನೆ ನೀಡಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...