ವರ್ಷಕ್ಕೆ 5 ಸಿಲಿಂಡರ್ ಉಚಿತ, ಅರ್ಧ ಬೆಲೆಗೆ 10 ಸಿಲಿಂಡರ್; ಆಟೋ ಚಾಲಕರಿಗೆ ಪ್ರತಿ ತಿಂಗಳು 2000 ರೂ.: ಹೆಚ್.ಡಿ.ಕೆ. ಘೋಷಣೆ

ಬೆಂಗಳೂರು: ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ವಶಕ್ಕೆ 5 ಸಿಲಿಂಡರ್ ಉಚಿತವಾಗಿ ನೀಡಲಾಗುವುದು. ಅರ್ಧ ಬೆಲೆಗೆ 10 ಸಿಲಿಂಡರ್ ಗಳನ್ನು ನೀಡುವ ಯೋಜನೆ ಜಾರಿಗೊಳಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.

ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆಯಲ್ಲಿ ಭಾಗವಹಿಸಿದ್ದ ಕುಮಾರಸ್ವಾಮಿ ಸುದ್ದಿಗಾರರೊಂದಿಗೆ ಮಾತನಾಡಿ, ಎಲ್ಪಿಜಿ ಸಿಲಿಂಡರ್ ಖರೀದಿಗೆ ಸಬ್ಸಿಡಿ ನೀಡುವುದಾಗಿ ಹೇಳಿ ಉಜ್ವಲ ಯೋಜನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ ಆಘಾತ ತಂದಿದೆ. ಸಿಲಿಂಡರ್ ಬೆಲೆ ಒಂದು ಸಾವಿರ ರೂಪಾಯಿ ದಾಟಿದ್ದು, ಬಡವರು ಜೀವನ ನಡೆಸುವುದು ಕಷ್ಟವಾಗಿದೆ ಎಂದು ಹೇಳಿದ್ದಾರೆ.

ಆಟೋ ಚಾಲಕರಿಗೆ ಮಾಸಿಕ 2 ಸಾವಿರ ರೂ. ನೀಡುವ ಯೋಜನೆ ಜಾರಿಗೆ ತರಲಾಗುವುದು. ಸರ್ಕಾರಿ ನೇಮಕಾತಿಯಲ್ಲಿ ಆಮೂಲಾಗ್ರ ಬದಲಾವಣೆ ತರಲಾಗುತ್ತದೆ. ಹಣ ಕೊಟ್ಟವರಿಗೆ ಸರ್ಕಾರಿ ಕೆಲಸ ಮಾರಾಟವಾಗುತ್ತಿದೆ. ಜೆಡಿಎಸ್ ಅಧಿಕಾರಕ್ಕೆ ಬಂದರೆ ಇಂತಹ ಅವೈಜ್ಞಾನಿಕ ತಾರತಮ್ಯ ವ್ಯವಸ್ಥೆಯನ್ನು ತೆಗೆದು ಹಾಕುತ್ತೇವೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read