ಬೆಂಗಳೂರು: ಗಣಿಗಾರಿಕೆ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ನಿರ್ಧಾರಕ್ಕೆ ರಾಜ್ಯ ಸರ್ಕಾರ ಕೊಕ್ಕೆ ಹಾಕಿದೆ ಎಂಬ ಆರೋಪ ಕೇಳಿ ಬಂದಿದೆ.
ದೇವದಾರಿ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ರಾಜ್ಯ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ. ಅರಣ್ಯ ತಿರುವಳಿ ಗುತ್ತಿಗೆ ಪತ್ರ ಮಾಡಿಕೊಡದಂತೆ ಅರಣ್ಯ ಸಚಿವರು ಸೂಚನೆ ನೀಡಿದ್ದಾರೆ. ಅರಣ್ಯ ಇಲಾಖೆಯ ಅಪರ ಕಾರ್ಯದರ್ಶಿಗಳಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಸಂಡೂರು ತಾಲೂಕಿನ ದೇವದಾರಿ ಹಿಲ್ ಪ್ರದೇಶದಲ್ಲಿ ಅದಿರು ಗಣಿಗಾರಿಕೆಗೆ ಕೆಐಒಸಿಎಲ್ ಕಂಪನಿ ಅರಣ್ಯ ತಿರುವಳಿ ಪಡೆದುಕೊಂಡಿದೆ. ಗಣಿಗಾರಿಕೆಗೆ ಅನುಮತಿ ನೀಡಿ ಕುಮಾರಸ್ವಾಮಿ ಸಹಿ ಹಾಕಿದ್ದರು. ಅರಣ್ಯ ಇಲಾಖೆಯಿಂದ ಪತ್ರಕ್ಕೆ ಸಹಿ ಹಾಗೂ ಜಮೀನು ಹಸ್ತಾಂತರ ಬಾಕಿ ಇದೆ. ಈಗ ಹಸ್ತಾಂತರ ತಡೆಯುವಂತೆ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ. ಈ ಹಿಂದೆ ಇದೇ ಸಂಸ್ಥೆಯಿಂದ ಕುದುರೆಮುಖ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಡೆಸಿದ್ದು, ಈ ಹಿಂದೆ ನಡೆದಿದ್ದ ಗಣಿಗಾರಿಕೆಯಲ್ಲಿ ಕಂಪನಿ ಲೋಪ ದೋಷ ಎಸಗಿತ್ತು. ಈ ಕಾರಣದಿಂದ ಆಕ್ಷೇಪ ವ್ಯಕ್ತಪಡಿಸಲಾಗಿದೆ ಎನ್ನಲಾಗಿದೆ.