ಬೆಂಗಳೂರು : ಮಾಜಿ ಸಿಎಂ ಕುಮಾರಸ್ವಾಮಿ ಕೇಸರಿ ಶಾಲು ಧರಿಸಬಾರದಿತ್ತು ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹೇಳಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ದೇವೇಗೌಡರು ಸಿಎಂ ಕುಮಾರಸ್ವಾಮಿ ಕೇಸರಿ ಶಾಲು ಹಾಕಬಾರದಿತ್ತು, ಕೇಸರಿ ಶಾಲು ಬದಲು ನಮ್ಮ ಪಕ್ಷದ ಶಾಲು ಧರಿಸಬಹುದಿತ್ತು. ಕೇಸರಿ ಶಾಲು ಹಾಕಿದ್ದನ್ನೇ ದೊಡ್ಡ ವ್ಯಾಖ್ಯಾನ ಮಾಡುವ ಅಗತ್ಯವಿಲ್ಲ ಎಂದರು.
ನಾವು ಇಬ್ಬರು ಸೇರಿ ಕಾಂಗ್ರೆಸ್ ವಿರುದ್ಧ ಹೋರಾಟ ಮಾಡುತ್ತೇವೆ, ಬಿಜೆಪಿ ಜೊತೆ ಹೋಗುವಾಗ ನಮ್ಮ ಶಾಲು ಹಾಕಿಕೊಂಡು ಹೋಗಬೇಕು, ನಾನಂತೂ ಖಂಡಿತವಾಗಿ ಕೇಸರಿ ಶಾಲು ಹಾಕುವುದಿಲ್ಲ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹೇಳಿದ್ದಾರೆ.