alex Certify BIG NEWS: ರಾಜಕೀಯ ಪ್ರತಿಷ್ಠೆಗೆ 2 ದಿನ ಕಲಾಪ ಬಲಿ: HDK ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜಕೀಯ ಪ್ರತಿಷ್ಠೆಗೆ 2 ದಿನ ಕಲಾಪ ಬಲಿ: HDK ಆಕ್ರೋಶ

ಕಳೆದ 2 ದಿನಗಳ ವಿಧಾನಮಂಡಲ ಕಲಾಪ ರಾಜಕೀಯ ಪ್ರತಿಷ್ಠೆಗೆ ಆಹುತಿಯಾಗಿದೆ. ಬೆಳಗಾವಿ ಕಲಾಪವನ್ನು ಬಲಿ ಪಡೆದ ಮೇಲೂ ರಾಜ್ಯಪಾಲರ ಭಾಷಣದ ಮೇಲೆ ಅಮೂಲ್ಯ ಚರ್ಚೆ ನಡೆಸಬೇಕಿದ್ದ ಈ ಸದನಕ್ಕೂ ಅದೇ ಚಾಳಿ ವಕ್ಕರಿಸಿದೆ. ಪ್ರಜಾಪ್ರಭುತ್ವಕ್ಕೆ ಗ್ರಹಣ ಹಿಡಿಸುವ ಕೆಲಸ ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳಿಗೋಸ್ಕರ ಇರುವುದೇ ಪ್ರಜಾಪ್ರಭುತ್ವ. ಅಮೆರಿಕದ ಮಾಜಿ ಅಧ್ಯಕ್ಷ ಅಬ್ರಹಾಂ ಲಿಂಕನ್ ಹೇಳಿದ ಈ ಮಾತು ಪ್ರಜಾಸತ್ತೆಯನ್ನು ಗೌರವಿಸುವ ಪ್ರತಿ ವ್ಯಕ್ತಿಗೂ ದಾರಿದೀಪ. ಆದರೆ, ಇವತ್ತು ಪ್ರಜಾಪ್ರಭುತ್ವವೆಂದರೆ ರಾಜಕೀಯದಿಂದ, ರಾಜಕೀಯಕ್ಕಾಗಿ, ರಾಜಕೀಯಕ್ಕೋಸ್ಕರವೇ ಎನ್ನುವಂತಾಗಿದೆ ಎಂದು ಟೀಕಿಸಿದ್ದಾರೆ.

ಹತ್ತು ನಿಮಿಷ ಧರಣಿ, ಆಮೇಲೆ ಕಲಾಪ ಮುಂದೂಡುವುದು, ಸದನ ನಡೆಯುವ ರೀತಿ ಇದೇನಾ? ಯಾವ ಪುರುಷಾರ್ಥಕ್ಕೆ ಈ ಅಧಿವೇಶನ? ದಿನಕ್ಕೆ ಒಂದೂವರೆಯಿಂದ ಎರಡು ಕೋಟಿ ರೂ. ನಷ್ಟು ಪೋಲಾಗುವ ಜನರ ತೆರಿಗೆ ಹಣಕ್ಕೆ ಉತ್ತರದಾಯಿತ್ವ ಯಾರದು? ಅವರ ನಿರೀಕ್ಷೆಗಳನ್ನು ಕಾಲ ಕಸ ಮಾಡಿಕೊಂಡ ರಾಜಕೀಯ ಪ್ರತಿಷ್ಠೆಗೆ ಕೊನೆ ಇಲ್ಲವೇ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...