alex Certify BIG NEWS : GST ರೀತಿ ಸರ್ಕಾರದಿಂದ YST ಸಂಗ್ರಹ ಆಗುತ್ತಿದೆ : ಯತೀಂದ್ರ ಸಿದ್ದರಾಮಯ್ಯ ವಿರುದ್ಧ HDK ಗಂಭೀರ ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : GST ರೀತಿ ಸರ್ಕಾರದಿಂದ YST ಸಂಗ್ರಹ ಆಗುತ್ತಿದೆ : ಯತೀಂದ್ರ ಸಿದ್ದರಾಮಯ್ಯ ವಿರುದ್ಧ HDK ಗಂಭೀರ ಆರೋಪ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರ, ವರ್ಗಾವಣೆ ದಂಧೆ ಆರೋಪ ಮಾಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಈಗ ಜಿಎಸ್ ಟಿ ರೀತಿ ವೈ ಎಸ್ ಟಿ ಸಂಗ್ರಹ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಕೇಂದ್ರ ಸರ್ಕಾರದಿಂದ ಜಿಎಸ್ ಟಿ ಸಂಗ್ರಹವಾಗುತ್ತಿದ್ದರೆ, ಇತ್ತ ರಾಜ್ಯ ಸರ್ಕಾರ ವೈ ಎಸ್ ಟಿ ಸಂಗ್ರಹ ಮಾಡುತ್ತಿದೆ. YST-ಯತೀಂದ್ರ ಸಿದ್ದರಾಮಯ್ಯ ಟ್ಯಾಕ್ಸ್. ಈ ಬಗ್ಗೆ ನಾನು ಮಾಹಿತಿ ಕಲೆ ಹಾಕಿದ್ದೇನೆ ಎಂದು ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಹೊಸ ಬಾಂಬ್ ಸಿಡಿಸಿದ್ದಾರೆ.

ಮಧ್ಯರಾತ್ರಿ 1 ಗಂಟೆಯವರೆಗೆ ಅಧಿಕಾರಗಳನ್ನು ಕರೆದು ಸಭೆ ನಡೆಸುತ್ತಾರೆ ಎಂದರೆ ಏನರ್ಥ? ಇದೊಂದು ಪಾರದರ್ಶಕ ಸರ್ಕಾರವಲ್ಲ. ವರ್ಗಾವಣೆ ದಂಧೆ ನಡೆದಿದೆ. ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಒಬ್ಬರೇನಾ ಮುಖ್ಯಮಂತ್ರಿ? ಸಿದ್ದರಾಮಯ್ಯ ಒಂದು ಹೇಳುತ್ತಾರೆ, ಸತೀಶ್ ಜಾರಕಿಹೊಳಿ ಒಂದು ಹೇಳ್ತಾರೆ ಎಷ್ಟು ಜನ ಸಿಎಂ ಇದ್ದಾರೆ ಎಂದು ಗುಡುಗಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...