ಬೆಂಗಳೂರು: ಲೈಂಗಿಕ ದೌರ್ಜನ್ಯ, ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ ಕೋರ್ಟ್ ನಿಂದ ರಿಲೀಫ್ ಸಿಕ್ಕಿಲ್ಲ.
ರೇವಣ್ಣ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲು ಕೋರ್ಟ್ ನಿರಾಕರಿಸಿದೆ. ಇದರಿಂದಾಗಿ ಯಾವುದೇ ಕ್ಷಣದಲ್ಲಿ ರೇವಣ್ಣ ಅವರನ್ನು ಬಂಧಿಸುವ ಸಾಧ್ಯತೆ ಇದೆ. ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದೆ. ವಿಚಾರಣೆಯನ್ನು ಮೇ 6ನೇ ತಾರೀಖಿಗೆ ಮುಂದೂಡಲಾಗಿದೆ.
ಜಾಮೀನು ಅರ್ಜಿ ವಜಾಗೊಂಡ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳ ತಂಡ ಪದ್ಮನಾಭನಗರದಲ್ಲಿರುವ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಆಗಮಿಸಿದೆ. ದೇವೇಗೌಡರ ನಿವಾಸದಲ್ಲಿ ಹೆಚ್.ಡಿ. ರೇವಣ್ಣ ತಂಗಿರುವ ಮಾಹಿತಿ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲು ಎಸ್ಐಟಿ ಅಧಿಕಾರಿಗಳ ತಂಡ ಆಗಮಿಸಿದೆ. ಎರಡು ಕಾರ್ ಗಳಲ್ಲಿ ಆಗಮಿಸಿದ ಎಸ್ಐಟಿ ಅಧಿಕಾರಿಗಳು ದೇವೇಗೌಡರ ನಿವಾಸದಲ್ಲಿ ಪರಿಶೀಲನೆ ನಡೆಸಿದ್ದಾರೆ. ಯಾವುದೇ ಕ್ಷಣ ರೇವಣ್ಣ ಬಂಧನ ಫಿಕ್ಸ್ ಎನ್ನಲಾಗಿದೆ.