ಬೆಂಗಳೂರು: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳ ತಂಡ ಬಂಧಿಸಿದೆ.
ರೇವಣ್ಣ ಜಾಮೀನು ಅರ್ಜಿಯನ್ನು ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿದ ಹಿನ್ನಲೆಯಲ್ಲಿ ಹೆಚ್.ಡಿ. ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ. ರೇವಣ್ಣ ಅವರನ್ನು ಎಸ್ಐಟಿ ಬಂಧಿಸಿ ಕರೆದೊಯ್ದಿದೆ.
ಪದ್ಮನಾಭನಗರದಲ್ಲಿರುವ ಹೆಚ್.ಡಿ. ದೇವೇಗೌಡರ ನಿವಾಸದಲ್ಲಿ ಹೆಚ್.ಡಿ. ರೇವಣ್ಣ ಇರುವ ಮಾಹಿತಿಯನ್ನು ಮೊದಲೇ ಕಲೆಹಾಕಿದ್ದ ಎಸ್ಐಟಿ ಅವರನ್ನು ಬಂಧಿಸಿದೆ. ಅವರ ಆರೋಗ್ಯ ತಪಾಸಣೆ ಬಳಿಕ ಎಸ್ಐಟಿ ಕಚೇರಿಗೆ ಕರೆತಂದು ವಿಚಾರಣೆ ನಡೆಸಲಾಗುವುದು. 24 ಗಂಟೆಯೊಳಗೆ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುವುದು. ಅದಕ್ಕಿಂತ ಮೊದಲು ಬಂಧನದ ಬಗ್ಗೆ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು.
ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಬಗ್ಗೆಯೂ ಎಸ್ಐಟಿ ಅಧಿಕಾರಿಗಳು ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕಲಿದ್ದಾರೆ.