ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಸ್ಐಟಿಯಿಂದ ಪ್ರಜ್ವಲ್.ಬಂಧನಕ್ಕೊಳಗಾಗಿದ್ದು, ಪುತ್ರನ ಪರ ಕಾನೂನು ಹೋರಾಟಕ್ಕೆ ಮುಂದಾದ ಮಾಜಿ ಸಚಿವ ಹೆಚ್.ಡಿ. ರೇವಣ್ಣ ನಿನ್ನೆ ರಾತ್ರಿ ವಕೀಲರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ.
ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರವಾಗಿ ವಕೀಲರೊಂದಿಗೆ ರೇವಣ್ಣ ಚರ್ಚೆ ನಡೆಸಿದ್ದು, ಆದಷ್ಟು ಬೇಗನೆ ಪ್ರಜ್ವಲ್ ಬಿಡುಗಡೆ ಮಾಡಿಸಲು ತಯಾರಿ ಮಾಡಿಕೊಂಡಿದ್ದಾರೆ. ರಾತ್ರಿ ವಕೀಲರೊಂದಿಗೆ ಈ ಕುರಿತಾಗಿ ಚರ್ಚೆ ನಡೆಸಿದ್ದಾರೆ.
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಸಂತ್ರಸ್ತೆ ಕಿಡ್ನಾಪ್ ಕೇಸ್ ನಲ್ಲಿ ಹೆಚ್.ಡಿ. ರೇವಣ್ಣ ಬಂಧನಕ್ಕೊಳಗಾಗಿ ಜಾಮೀನು ಪಡೆದುಕೊಂಡಿದ್ದಾರೆ.
ಹೆಚ್.ಡಿ. ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ತೀರ್ಪು ಶುಕ್ರವಾರ ಪ್ರಕಟವಾಗಲಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡದಿದ್ದಲ್ಲಿ ಭವಾನಿ ರೇವಣ್ಣ ಜೈಲು ಸೇರಬೇಕಾಗುತ್ತದೆ.