ಹಾಸನ: ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಭವಾನಿ ರೇವಣ್ಣ ಅವರಿಗೆ ಜೆಡಿಎಸ್ ಟಿಕೆಟ್ ನೀಡುವ ವಿಚಾರ ಚರ್ಚೆಗೆ ಕಾರಣವಾಗಿದೆ. ಹಾಸನ ಕ್ಷೇತ್ರದಿಂದ ಭವಾನಿ ರೇವಣ್ಣ ಆಕಾಂಕ್ಷಿಯಾಗಿದ್ದರೂ, ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅಲ್ಲಿ ಪ್ರಬಲ ಪ್ರತಿಸ್ಪರ್ಧಿ ಇದ್ದಾರೆ ಎಂದು ಹೇಳುವ ಮೂಲಕ ಟಿಕೇಟ್ ನೀಡದಿರುವ ಬಗ್ಗೆ ಸಂದೇಶ ರವಾನಿಸಿದ್ದಾರೆ.
ಈ ಬಗ್ಗೆ ತೀವ್ರ ಚರ್ಚೆಯ ನಂತರ ಮಾಜಿ ಸಚಿವ ಹೆಚ್.ಡಿ. ರೇವಣ್ಣ ವಿವಾದಕ್ಕೆ ತೆರೆ ಹೇಳಿದಿದ್ದರು. ಹಾಸನ ವಿಧಾನಸಭೆ ಕ್ಷೇತ್ರಕ್ಕೆ ಟಿಕೆಟ್ ನೀಡುವ ಬಗ್ಗೆ ದೇವೇಗೌಡರು, ಕುಮಾರಸ್ವಾಮಿ ಹಾಗೂ ಸಿ.ಎಂ. ಇಬ್ರಾಹಿಂ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹೇಳಿದ್ದರು.
ಇಂದು ಹೆಚ್.ಡಿ. ರೇವಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ. ಪಕ್ಷದ ವರಿಷ್ಠರು ಒಪ್ಪಿದರೆ ಹಾಸನ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಪಕ್ಷ ಹೇಳಿದರೆ ಹಾಸನ ಕ್ಷೇತ್ರದಿಂದ ಸ್ಪರ್ಧಿಸಲು ನಾನು ರೆಡಿ ಎಂದು ಹಾಸನದಲ್ಲಿ ರೇವಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ. ಹಾಸನ ಕ್ಷೇತ್ರದಿಂದ ಸ್ಪರ್ಧಿಸುವ ಇಂಗಿತ ಹೊರ ಹಾಕಿದ್ದಾರೆ. ಪಕ್ಷ ಹೇಳಿದರೆ ಸ್ಪರ್ಧಿಸಲು ಸಿದ್ಧವೆಂದು ಮೊದಲ ಬಾರಿಗೆ ಹೆಚ್.ಡಿ. ರೇವಣ್ಣ ತಿಳಿಸಿದ್ದಾರೆ.
ಶಾಸಕ ಪ್ರೀತಂ ಗೌಡ ಸವಾಲು ಸ್ವೀಕರಿಸಿದ್ದೇನೆ. ಸ್ಪರ್ಧೆಗೆ ಸಿದ್ಧವಾಗಿದ್ದೇನೆ ಎಂದು ಹೇಳಿದ್ದಾರೆ. ಹಾಸನ ಕ್ಷೇತ್ರದಲ್ಲಿ ತಮ್ಮ ವಿರುದ್ಧ ಹೆಚ್.ಡಿ. ರೇವಣ್ಣ ಸ್ಪರ್ಧಿಸಿ ಗೆಲ್ಲಲಿ. ಐವತ್ತು ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತೇನೆ. ಒಂದು ಮತ ಕಡಿಮೆಯಾದರೂ ಮತ್ತೆ ಚುನಾವಣೆಗೆ ಹೋಗುತ್ತೇನೆ ಎಂದು ಹೆಚ್.ಡಿ. ರೇವಣ್ಣ ಅವರಿಗೆ ಹಾಸನ ಬಿಜೆಪಿ ಶಾಸಕ ಪ್ರೀತಂ ಗೌಡ ಸವಾಲು ಹಾಕಿದ್ದರು.
ಈ ಹಿನ್ನೆಲೆಯಲ್ಲಿ ಪಕ್ಷ ಹೇಳಿದರೆ ಪ್ರೀತಂ ಗೌಡ ಸವಾಲು ಸ್ವೀಕರಿಸಲು ಸಿದ್ಧವೆಂದು ಹೆಚ್.ಡಿ. ರೇವಣ್ಣ ಹೇಳಿದ್ದಾರೆ. ಕೆಲವರ ಸವಾಲು ಸ್ವೀಕರಿಸಬೇಕಲ್ಲವೇ ಎಂದು ತಿಳಿಸಿದ್ದಾರೆ. ಕುಮಾರಸ್ವಾಮಿಯವರೇ ನಮ್ಮ ನಾಯಕರು. ಅವರು ಹೇಳಿದಂತೆ ಕೇಳುತ್ತೇನೆ. ಹಾಸನ ಜಿಲ್ಲೆಯಲ್ಲಿ 7ಕ್ಕೆ 7 ಕ್ಷೇತ್ರಗಳಲ್ಲಿ ಗೆಲ್ಲಬೇಕೆಂಬುದು ನಮ್ಮ ಗುರಿಯಾಗಿದೆ. ಹೀಗಾಗಿ ಹಾಸನ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದು ರೇವಣ್ಣ ತಿಳಿಸಿದ್ದಾರೆ.
ಈ ಮೂಲಕ ಹಾಸನ ಕ್ಷೇತ್ರದಲ್ಲಿ ಟಿಕೆಟ್ ಗೊಂದಲ ನಿವಾರಣೆಗೆ ತಂತ್ರ ಹೂಡಿದ್ದಾರೆ. ಹಾಸನ ಮತ್ತು ಹೊಳೆನರಸೀಪುರದಲ್ಲಿ ಸ್ಪರ್ಧಿಸಿ ಗೊಂದಲ ನಿವಾರಣೆಗೆ ತಂತ್ರ ರೂಪಿಸಿದ್ದಾರೆ. ಹಾಸನದಿಂದ ರೇವಣ್ಣ ಸ್ಪರ್ಧಿಸಿ, ಹೊಳೆನರಸೀಪುರದಿಂದ ಭವಾನಿ ರೇವಣ್ಣ ಅವರಿಗೆ ಟಿಕೆಟ್ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.