alex Certify ಜೈಲು ಸೇರಿದ ಮಾಜಿ ಸಚಿವ ಹೆಚ್.ಡಿ. ರೇವಣ್ಣಗೆ ಬಂಧಿ ನಂಬರ್ 4567 | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೈಲು ಸೇರಿದ ಮಾಜಿ ಸಚಿವ ಹೆಚ್.ಡಿ. ರೇವಣ್ಣಗೆ ಬಂಧಿ ನಂಬರ್ 4567

ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ, ಹೊಳೆನರಸೀಪುರ ಜೆಡಿಎಸ್ ಶಾಸಕ ಹೆಚ್.ಡಿ. ರೇವಣ್ಣ ಜೈಲು ಸೇರಿದ್ದಾರೆ.

ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿರುವ ರೇವಣ್ಣ ಅವರಿಗೆ ವಿಚಾರಣಾಧೀನ ಬಂಧಿ ನಂಬರ್ 4567 ಸಂಖ್ಯೆಯನ್ನು ನೀಡಲಾಗಿದೆ. ಜೈಲಿಗೆ ಬರುವ ಎಲ್ಲಾ ಆರೋಪಿತರಿಗೆ ಎಂಟ್ರಿ ನಂಬರ್ ನೀಡಲಾಗುತ್ತದೆ. ಅಂತೆಯೇ ರೇವಣ್ಣ ಅವರಿಗೆ ವಿಚಾರಣಾಧೀನ ಬಂಧಿ ಸಂಖ್ಯೆಯನ್ನು ಜೈಲಿನ ಅಧಿಕಾರಿಗಳು ನೀಡಿದ್ದಾರೆ.

ಲೈಂಗಿಕ ಕಿರುಕುಳದ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಎಸ್ಐಟಿಯಿಂದ ಬಂಧನಕ್ಕೊಳಗಾಗಿರುವ ರೇವಣ್ಣ ಅವರಿಗೆ ನ್ಯಾಯಾಲಯ ಮೇ 14ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...