ಬೆಂಗಳೂರು: ನನಗೆ ಕಾನೂನಿನ ಮೇಲೆ ಗೌರವವಿದೆ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹೇಳಿದ್ದಾರೆ. ಜೈಲಿಂದ ಬಿಡುಗಡೆ ಬಳಿಕ ಹೆಚ್.ಡಿ. ರೇವಣ್ಣ ಮೊದಲ ಪ್ರತಿಕ್ರಿಯೆ ನೀಡಿದ್ದು, ನ್ಯಾಯಾಲಯದ ಆದೇಶವನ್ನು ನಾನು ಪಾಲಿಸುತ್ತೇನೆ ಎಂದು ಹೇಳಿದ್ದಾರೆ.
ನನಗೆ ದೇವರ ಮೇಲೆ ನಂಬಿಕೆ ಇದೆ. ನಾನು ನನ್ನ ವಿರುದ್ಧದ ಆರೋಪದಿಂದ ಮುಕ್ತನಾಗುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಜೈಲಿಂದ ಬಿಡುಗಡೆಯಾದ ನಂತರ ವಿವಿಧ ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿದ ರೇವಣ್ಣ ಬಳಿಕ ಪದ್ಮನಾಭನಗರದ ದೇವೇಗೌಡರ ನಿವಾಸದ ಬಳಿ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿದ್ದಾರೆ.